• Home  
  • ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ಕಳತ್ತೂರು ಕ್ಲಸ್ಟ‌ರ್ ಪ್ರತಿಭಾ ಕಾರಂಜಿ (Kalathur Cluster ‘Pratibha Karanji’ at Shirva Hindu High School)
- ಶಾಲಾ ಕಾಲೇಜು

ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ಕಳತ್ತೂರು ಕ್ಲಸ್ಟ‌ರ್ ಪ್ರತಿಭಾ ಕಾರಂಜಿ (Kalathur Cluster ‘Pratibha Karanji’ at Shirva Hindu High School)

Share: ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ಕಳತ್ತೂರು ಕ್ಲಸ್ಟ‌ರ್ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿದ ಸಂಘದ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ (Shirva) ಶಿರ್ವ, ನ. 19: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾಯವರ ಕಚೇರಿ ಉಡುಪಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಉಡುಪಿ ಹಾಗೂ ಶಿರ್ವ ಹಿಂದೂ ಪ್ರೌಢಶಾಲೆಯ ಸಹಭಾಗಿತ್ವದಲ್ಲಿ ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವವು ಬುಧವಾರ ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ನಡೆಯಿತು.   ಶಿರ್ವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ಕಾರ್ಯಕ್ರಮ […]

(Shirva) ಶಿರ್ವ, ನ. 19: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾಯವರ ಕಚೇರಿ ಉಡುಪಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಉಡುಪಿ ಹಾಗೂ ಶಿರ್ವ ಹಿಂದೂ ಪ್ರೌಢಶಾಲೆಯ ಸಹಭಾಗಿತ್ವದಲ್ಲಿ ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವವು ಬುಧವಾರ ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ನಡೆಯಿತು.

  ಶಿರ್ವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.

  ಅಧ್ಯಕ್ಷತೆ ವಹಿಸಿದ್ದ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ. ವೈ. ಭಾಸ್ಕರ ಶೆಟ್ಟಿ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳು ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಏನಾದರೂ ಸಾಧಿಸಬಹುದು ಎಂಬ ಆತ್ಮವಿಶ್ವಾಸ ತುಂಬುವ ವೇದಿಕೆ ಪ್ರತಿಭಾ ಕಾರಂಜಿಯಾಗಿದೆ ಎಂದು ಹೇಳಿದರು.

 ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ ಪ್ರತಿಭಾ ಪ್ರಸ್ತಾವನೆಗೈದರು.

   ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕಿ ಅಶ್ವಿನಿ ಕನ್ನಂತ ಸ್ಪರ್ಧೆಗಳ ವಿವರ ಮತ್ತು ವಿಷಯಗಳ ಕುರಿತು ಮಾಹಿತಿ ನೀಡಿದರು.

  ಜ್ಞಾನ ಚೇತನ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ ವೇದಿಕೆಯಲ್ಲಿದ್ದರು.

   ತೀರ್ಪುಗಾರರನ್ನು ಮತ್ತು ನಿರ್ವಾಹಕರನ್ನು ಗೌರವಿಸಲಾಯಿತು.  

 ಕಳತ್ತೂರು ಕ್ಲಸ್ಟರ್‌ನ 16 ಪ್ರೌಢ, ಹಿರಿಯ ಹಾಗೂ ಕಿರಿಯ ಶಾಲೆಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಭಾಗವಹಿಸಿದ್ದರು.

   ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ವಸಂತಿ ಸ್ವಾಗತಿಸಿದರು. ಶಿಕ್ಷಕಿ ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಂದ್ರನಾಥ ಶೆಟ್ಟಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.