ಶಿವಮೊಗ್ಗ; ವಿದ್ಯುತ್ ಬಿಲ್ ಏರಿಕೆ ವಿರೋಧಿಸಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಕಿಡಿಗೇಡಿಯೋರ್ವ ಮೆಸ್ಕಾಂ ಕಚೇರಿಗೆ ಕಲ್ಲು ತೂರಿ ಕಿಟಕಿ ಗಾಜು ಒಡೆದು ಹಾಕಿದ ಘಟನೆ ಬುಧವಾರ ಘಟಿಸಿದೆ.
ವಿದ್ಯುತ್ ದರ ಏರಿಕೆಯ ವಿರುದ್ಧ ಬಿಜೆಪಿಯಿಂದ ಇಲ್ಲಿನ ರೈಲು ನಿಲ್ದಾಣದ ಬಳಿಯ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.ಈ ವೇಳೆ ಶಾಸಕ ಚೆನ್ನಬಸಪ್ಪ ಸೇರಿ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪ್ರತಿಭಟನೆ ವೇಳೆ ಬಿಜೆಪಿ ಮುಖಂಡರ ಭಾಷಣ ಮುಗಿಯುತ್ತಿದ್ದಂತೆಯೇ ಮೆಸ್ಕಾಂ ಕಚೇರಿಗೆ ಬೀಗ ಹಾಕಲು ಮುಂದಾದ ಪ್ರತಿಭಟನಾಕಾರರು ಮೆಸ್ಕಾಂ ಪ್ರವೇಶ ದ್ವಾರಕ್ಕೆ ನುಗ್ಗಿದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಈ ವೇಳೆ ನಡೆದ ತಳ್ಳಾಟದ ವೇಳೆ ಕೆಲವರು ಮೆಸ್ಕಾಂ ಕಚೇರಿಗೆ ಕಲ್ಲು ತೂರಿದ್ದಾರೆ.
ಮೆಸ್ಕಾಂ ಕಚೇರಿಯ ಕಿಟಕಿ ಗಾಜು ಪುಡಿಯಾಗಿದೆ.ಹೆಚ್ಚಿನ ಸಂಖ್ಯೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಕಲ್ಕು ತೂರಾಟಕ್ಕೆ ಸಂಬಂಧಿಸಿದಂತೆ ಮುರುಗೇಶ ಎಂಬಾತನಿಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

