• Home  
  • ಶೀರೂರು ಕಳುಹಿತ್ಲು : ದೋಣಿ ದುರಂತ, ಇಬ್ಬರು ಮೀನುಗಾರರ ಧಾರುಣ ಸಾವು (Sheeruru – Boat disaster, two Fisherman died)
- ಅಪರಾಧ

ಶೀರೂರು ಕಳುಹಿತ್ಲು : ದೋಣಿ ದುರಂತ, ಇಬ್ಬರು ಮೀನುಗಾರರ ಧಾರುಣ ಸಾವು (Sheeruru – Boat disaster, two Fisherman died)

Share: ಶೀರೂರು ಕಳುಹಿತ್ಲು : ದೋಣಿ ದುರಂತ, ಇಬ್ಬರು ಮೀನುಗಾರರ ಧಾರುಣ ಸಾವು ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಬಿದ್ದು ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಭಾನುವಾರ ರಾತ್ರಿ 10-00 ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ IND KA 03 MO-4827 ದೋಣಿಯಲ್ಲಿ 3 ಜನ ಮೀನುಗಾರಿಕೆ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಸೋಮವಾರ ಬೆಳಿಗ್ಗೆ 01.30 ರ ಸುಮಾರಿಗೆ ವಾಪಾಸು […]

ಶೀರೂರು ಕಳುಹಿತ್ಲು : ದೋಣಿ ದುರಂತ, ಇಬ್ಬರು ಮೀನುಗಾರರ ಧಾರುಣ ಸಾವು

ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಬಿದ್ದು ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.

ಭಾನುವಾರ ರಾತ್ರಿ 10-00 ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ IND KA 03 MO-4827 ದೋಣಿಯಲ್ಲಿ 3 ಜನ ಮೀನುಗಾರಿಕೆ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಸೋಮವಾರ ಬೆಳಿಗ್ಗೆ 01.30 ರ ಸುಮಾರಿಗೆ ವಾಪಾಸು ಬರುವಾಗ ಶಿರೂರು ಕಳುಹಿತ್ಲು ಅಳಿವೆ ಸಮೀಪ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ (45 ) ಮಿಸ್ಬಾ ಯೂಸುಫ್ (48) ಮೃತಪಟ್ಟಿದ್ದಾರೆ.

ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ( 37) ಹಡವಿನಕೋಣೆ ಇವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ರವರು ರಕ್ಷಣೆ ಮಾಡಿದ್ದಾರೆ.

ಈ ಭಾಗದಲ್ಲಿ ಕೆಲವೇ ತಿಂಗಳುಗಳ ಹಿಂದೆ ಇಬ್ಬರು ಮೀನುಗಾರರ ಸಮುದ್ರ ಪಾಲಾಗಿದ್ದು, ಈ ವರ್ಷ ಬೈಂದೂರು ಭಾಗದಲ್ಲಿ ಅತ್ಯಧಿಕ ಮೀನುಗಾರಿಕಾ ದುರಂತಗಳು ನಡೆದಿದೆ.

ಕರಾವಳಿ ಕಾವಲು ಪಡೆ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.