ಶ್ರೀ ಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ ಅಡುಗೆ ಕೋಣೆ ಉದ್ಘಾಟಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಕನಕನ ಕಿಂಡಿಯಲ್ಲಿ ದೇವರ ದರ್ಶನ ಪಡೆದ ಕೇಂದ್ರ ಸಚಿವೆ
(Udupi) ಉಡುಪಿ: ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಬೆಳಿಗ್ಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ಕೃಷ್ಣ ಮಠದಲ್ಲಿ ದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಅಡುಗೆ ಕೋಣೆ (ಪಾಯದ ಕೋಣೆ) ಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಧುಕರ್ ಮುದ್ರಾಡಿ ಮತ್ತು ಮಠದ ಸಿಬ್ಬಂದಿ, ಭಕ್ತಾಧಿಗಳು ಉಪಸ್ಥಿತರಿದ್ದರು.

