ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸೀತಾರಾಮ ಕಲ್ಯಾಣೋತ್ಸವಕ್ಕೆ 5 ಲಕ್ಷ ರೂ. ಸಹಾಯಹಸ್ತ
ಉದ್ಯಾವರ ಕೊಪ್ಲ ಶ್ರೀ ರಾಮ ಭಜನಾ ಮಂದಿರದ ಆಯೋಜನೆಯಲ್ಲಿ ನಡೆದ ಸೀತಾರಾಮ ಕಲ್ಯಾಣೋತ್ಸವ
(Udyavara) ಉದ್ಯಾವರ : ಉದ್ಯಾವರ ಕೊಪ್ಲ ಶ್ರೀ ರಾಮ ಭಜನಾ ಮಂದಿರ ವತಿಯಿಂದ ನಡೆದ ಸೀತಾರಾಮ ಕಲ್ಯಾಣೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ರೂ. ಸಹಾಯಹಸ್ತ ಲಭಿಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಪೂಜ್ಯ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿರುವ 5 ಲಕ್ಷ ರೂ. ಮೊತ್ತದ ಮಂಜೂರಾತಿ ಪತ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ ಹಾಗೂ ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ನವೀನ್ ಅಮೀನ್ ಶಂಕರಪುರರವರು ಕಲ್ಯಾಣೋತ್ಸವದ ಆಯಜಕರಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಚೆನ್ನಕೇಶವ ಭಟ್, ಸೀತಾರಾಮ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಜೀತೇಂದ್ರ ಶೆಟ್ಟಿ, ಕಾರ್ಯದರ್ಶಿ ಜನಾರ್ಧನ ಜಿ., ವಾಸುದೇವ ಸಾಲಿಯಾನ್, ಭಜನಾ ಮಂಡಳಿ ಪದಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಒಕ್ಕೂಟದ ಪದಾಧಿಕಾರಿಗಳು, ಲಕ್ಷ್ಮಣ ಮಟ್ಟು, ಹರೀಶ್ ಮಟ್ಟು ಉಪಸ್ಥಿತರಿದ್ದರು.
ಸೀತಾರಾಮ ಕಲ್ಯಾಣೋತ್ಸವ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಪೂಜ್ಯ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಲಾಯಿತು.

