ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಅದಮಾರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ ಪ್ರೇರಣಾ ಕಾರ್ಯಕ್ರಮ
ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದ ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ಉಪನ್ಯಾಸಕ ಸಂತೋಷ್
(Adamaru) ಅದಮಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಪಡುಬಿದ್ರಿ ವಲಯದ ಅದಮಾರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ ಪ್ರೇರಣಾ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದಲ್ಲಿ ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ಉಪನ್ಯಾಸಕ ಸಂತೋಷರವರು ಭಾಗವಹಿಸಿ ಮನೆಯಲ್ಲಿ ಇರುವ ಮಹಿಳೆಯರು ಯಾವ ಸ್ವ ಉದ್ಯೋಗವನ್ನು ಮಾಡಬಹುದು ಮತ್ತು ಸ್ವ ಉದ್ಯೋಗದ ಬಗ್ಗೆ ಹೆಚ್ಚು ಆಸಕ್ತಿ ವಹಿಸುವಂತೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸವಿತಾ, ಸೇವಾ ಪ್ರತಿನಿಧಿ ಶ್ರೀಮತಿ ಪಾರ್ವತಿ, ಶ್ರೀಮತಿ ಸುಜಾತಾ ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

