ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ: ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ (Dharmasthala Gramabhivruddi Yojane : Interaction with lake committee members)
ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ: ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ
(Dharmasthala) ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ದಗಂಗಾ ಅಭಿವೃದ್ಧಿ ವಿಭಾಗದ ವತಿಯಿಂದ ಕೆರೆ ಅಭಿವೃದ್ಧಿ ಸಮಿತಿಯ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಡಿ. 17ರಂದು ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೆಂದ್ರ ಹೆಗ್ಗಡೆಯವರು ಕಾರ್ಯಕ್ರಮ ಉದ್ಘಾಟಿಸಿದರು.
ಅವರು 800 ನೇ ಕೆರೆ ಹಸ್ತಾಂತರಿಸಿದ ಬಳಿಕ ಮಾತನಾಡಿ, ಕ್ಷೇತ್ರದ ಅನೇಕ ಕಾರ್ಯಕ್ರಮಗಳಲ್ಲಿ ಕೆರೆ ಅಭಿವೃದ್ಧಿ ಕಾರ್ಯಕ್ರಮ ಅತ್ಯಂತ ಪ್ರಯೋಜನ ಕಾರಿಯಾಗಿದೆ. ಮುಂಬರುವ ದಿನಗಳಲ್ಲಿ 1000 ಕೆರೆಗಳ ಅಭಿವೃದ್ಧಿ ಕೆಲಸ ಇನ್ನಷ್ಟು ನಡೆಯಲಿದೆ. ಕೃಷಿಗೆ, ಮನುಷ್ಯರಿಗೆ, ಪ್ರಾಣಿ ಪಕ್ಷಿಗಳಿಗೆ ಜಲಬೇಕು. ಇದಕ್ಕಾಗಿ ಜೀವ ಜಲ ಕೈಗೊಂಡಿದ್ದೇವೆ ಎಂದರು.
ಕ್ಷೇತ್ರದ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಮಾತನಾಡಿ, ದ.ಕ.ಜಿಲ್ಲೆಯಲ್ಲಿ ಒಂದು ಕೆರೆ ಅಭಿವೃದ್ಧಿ ಮಾಡಬೇಕೆಂಬ ಕನಸಿತ್ತು. ಇಂದು ರಾಜ್ಯದಲ್ಲಿ 800 ಕೆರೆ ಅಭಿವೃದ್ಧಿಯಾಗಿದೆ. ಒಂದೊಂದು ಕೆರೆಯು ಆ ಊರಿನ ಕಲ್ಪವೃಕ್ಷ. ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.
ವೇದಿಕೆಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್, ಖ್ಯಾತ ಜಲ ತಜ್ಞ ಶಿವಾನಂದ ಕಳವೆ ಉಪಸ್ಥಿತರಿದ್ದರು.
ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಪ್ರಸ್ತಾವಿಸಿ, ಸ್ವಾಗತಿಸಿದರು. ಶಿವಾನಂದ ಆಚಾರ್ಯ ನಿರೂಪಿಸಿದರು.
ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಿಂದ ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರು ಆಗಮಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.