• Home  
  •   ಶ್ರೀ ಕ್ಷೇತ್ರ ಶಂಕರಪುರದಲ್ಲಿ19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ (19-foot-tall stone statue installation and Brahma Kalashotsava at Sri Kshetra Shankarpura)
- ಧಾರ್ಮಿಕ

  ಶ್ರೀ ಕ್ಷೇತ್ರ ಶಂಕರಪುರದಲ್ಲಿ19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ (19-foot-tall stone statue installation and Brahma Kalashotsava at Sri Kshetra Shankarpura)

Share:   ಶ್ರೀ ಕ್ಷೇತ್ರ ಶಂಕರಪುರದಲ್ಲಿ19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮಾ. 31 ರಿಂದ ಎ. 2 ರವರೆಗೆ ಮೂರ್ತಿ ಪ್ರತಿಷ್ಠೆ,  ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ   (Kaup)ಕಾಪು : ಹಿಂದೂ ಬಾಂಧವರ ಒಗ್ಗಟ್ಟು ಮತ್ತು ಏಳಿಗೆಯ ಮಹಾ ಸಂಕಲ್ಪದಲ್ಲಿ 19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು  ಮಾ. 31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದೆ ಎಂದು ಶ್ರೀ ಕ್ಷೇತ್ರ […]

  (Kaup)ಕಾಪು : ಹಿಂದೂ ಬಾಂಧವರ ಒಗ್ಗಟ್ಟು ಮತ್ತು ಏಳಿಗೆಯ ಮಹಾ ಸಂಕಲ್ಪದಲ್ಲಿ 19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು  ಮಾ. 31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದೆ ಎಂದು ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಯಿ ಮಠದ ಪೀಠಾಧಿಪತಿ ಶ್ರೀ ಸಾಯಿ ಈಶ್ವರ್ ಗುರೂಜಿ ಹೇಳಿದರು.

  ಅವರು ಬುಧವಾರ ಕಾಪು ಪತ್ರಿಕಾ ಭವನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

   ಸುಮಾರು 11 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರದಲ್ಲಿ ಮಾಡಿಕೊಂಡು ಬರಲಾಗುತ್ತಿದೆ. ಶ್ರೀ ಕ್ಷೇತ್ರ ಆವರಣದಲ್ಲಿ ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ 19 ಅಡಿ ಎತ್ತರದ ಏಕ ಶಿಲಾ ಶ್ರೀ ಮುಖ್ಯಪ್ರಾಣನ ಮೂರ್ತಿ ಸ್ಥಾಪನೆಯನ್ನು 2026 ಎಪ್ರಿಲ್ 02 ರಂದು ಮಾಡಲಾಗುವುದು.

 ಶ್ರೀ ಮುಖ್ಯಪ್ರಾಣನ ಮೂರ್ತಿಯನ್ನು ಮಾರ್ಚ್ 14 ರಂದು ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ತರಲಾಗುವುದು.

  ಮಾರ್ಚ್ 26 ರಂದು ಹನುಮ ಜನ್ಮ ಭೂಮಿಯಿಂದ ರಾಮನವಮಿಯಂದು ಹನುಮ ಜ್ಯೋತಿ ಮತ್ತು ಹನುಮ ಧ್ವಜವು ಹೊರಟು ಮಾರ್ಚ್ 29ಕ್ಕೆ ಉಡುಪಿ ತಲುಪಲಿದೆ. ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಿಂದ ಹನುಮ ಜ್ಯೋತಿ, ಹನುಮಧ್ವಜ ಹಾಗೂ ಅವಧೂತ ಭಗವಾನ್ ನಿತ್ಯಾನಂದ ಸ್ವಾಮಿಯ 200 ಕೆಜಿ ತೂಕದ ಪಂಚಲೋಹ ಮೂರ್ತಿಯು ಶ್ರೀ ಕ್ಷೇತ್ರಕ್ಕೆ ತರಲಾಗುವುದು.

  ಮಾರ್ಚ್ 31 ರಿಂದ ಎಪ್ರಿಲ್ 2ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೂರ್ತಿ ಸ್ಥಾಪನೆ ಹಾಗೂ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದರು.

   ಪತ್ರಿಕಾಗೋಷ್ಠಿಯಲ್ಲಿ ಗೀತಾಂಜಲಿ ಎಂ. ಸುವರ್ಣ, ಅಭಿರಾಜ್ ಎಂ. ಸುವರ್ಣ, ಸುನಿಲ್ ಕೆ.ಆ‌ರ್., ವಿಜಯ ಕೊಡವೂರು, ವೀಣಾ ಎಸ್. ಶೆಟ್ಟಿ, ಸತೀಶ್ ದೇವಾಡಿಗ, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.