• Home  
  • ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ (Sri Kshetra Shankarpura: Green campaign launched for breath)
- ಪ್ರಚಲಿತ

ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ (Sri Kshetra Shankarpura: Green campaign launched for breath)

Share: ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಶಂಕರಪುರ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ (Shankarapura) ಶಂಕರಪುರ; ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ಉಸಿರಿಗಾಗಿ ಹಸಿರು ಅಭಿಯಾನ ಕಾರ್ಯಕ್ರಮ  ಗುರವಾರ ವೆರವೇರಿತು.  ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಶಂಕರಪುರ ಏಕ ಜಾತಿ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ ಉದ್ಘಾಟಿಸಿರು. ಈ ಸಂದರ್ಭ ಶ್ರೀ ಸಾಯಿ ಈಶ್ವರ ಗುರೂಜಿ ಮಾತನಾಡಿ, […]

(Shankarapura) ಶಂಕರಪುರ; ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ಉಸಿರಿಗಾಗಿ ಹಸಿರು ಅಭಿಯಾನ ಕಾರ್ಯಕ್ರಮ  ಗುರವಾರ ವೆರವೇರಿತು.

 ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಶಂಕರಪುರ ಏಕ ಜಾತಿ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ ಉದ್ಘಾಟಿಸಿರು.

ಈ ಸಂದರ್ಭ ಶ್ರೀ ಸಾಯಿ ಈಶ್ವರ ಗುರೂಜಿ ಮಾತನಾಡಿ, ಇಂದು ಪ್ರಕೃತಿ ಹಲವಾರು ವೈರುಧ್ಯ ಗಳಿಂದ ಕೂಡಿದೆ. ಮಳೆಗಾಲದಲ್ಲಿ ಸರಿಯಾಗಿ ಮಳೆ ಬರುತ್ತಿಲ್ಲ. ಇದಕ್ಕೆಲ್ಲ ಕಾರಣ ಪ್ರಕೃತಿಯ ನಾಶ. ಈ ನಿಟ್ಟಿನಲ್ಲಿ ಉಸಿರಿಗಾಗಿ ಹಸಿರು ಅಭಿಯಾನ ಕ್ಷೇತ್ರದ ವತಿಯಿಂದ ಪ್ರಾರಂಭಿಸಲಾಗಿದೆ. ಪ್ರತಿಯೊಬ್ಬರೂ ವರ್ಷಕ್ಕೆ ಕನಿಷ್ಠ ಒಂದು ಗಿಡವನಾದರೂ ನೆಟ್ಟು ಬೆಳೆಸುವ ಕಾರ್ಯ ನಡೆಯಬೇಕಾಗಿದೆ ಎಂದಅವರು, ಮುಂದಿನ ದಿನಗಳಲ್ಲಿ ಈ ಅಭಿಯಾನ ರಾಜ್ಯವಾಪಿ ನಡೆಯಲಿದೆ ಎಂದರು.

 ಮುಖ್ಯ ಅತಿಥಿ ಸಮಾಜಕಾರ್ಯ ಉಪನ್ಯಾಸಕ ಡಾ. ಗಣೇಶ್ ಪ್ರಸಾದ್ ಜಿ ನಾಯಕ್  ಗಿಡಗಳನ್ನು ವಿತರಿಸಿ ಮಾತನಾಡಿ, ಪ್ರಕೃತಿಯನ್ನು ಉಳಿಸಿದರೆ ಮಾತ್ರ ಜೀವಸಂಕುಲ ಉಳಿಯಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡ ನೆಟ್ಟು ಬೆಳೆಸುವ ಕಾರ್ಯ ಮಾಡಬೇಕು. ಶ್ರೀ ಕ್ಷೇತ್ರದ ವತಿಯಿಂದ  ನಡೆಯುವ ಈ ಯೋಜನೆ ಅಪೂರ್ವವಾಗಿದೆ ಎಂದರು.

  ವೇದಿಕೆಯಲ್ಲಿ ಮಂದಿರದ ಟ್ರಸ್ಟಿ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ರಾಮಪ್ಪ ಪೂಜಾರಿ ಸಂತೆಕಟ್ಟೆ  ಮುಂತಾದವರು ಉಪಸ್ಥಿತರಿದ್ದರು.

 ಈ ಸಂದರ್ಭದಲ್ಲಿ ಭಕ್ತರಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು.

  ಕಾರ್ಯಕ್ರಮದ ಸಂಯೋಜಕ, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.