• Home  
  •   ಶ್ರೀ ಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ (Sri Lakshmivarathirtha 8th year worship of Sripada)
- ಧಾರ್ಮಿಕ

  ಶ್ರೀ ಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ (Sri Lakshmivarathirtha 8th year worship of Sripada)

Share:   ಶ್ರೀ ಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ನಡೆದ ಮಹೋತ್ಸವ  (Udupi) ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ಸಂಪನ್ನಗೊಂಡಿತು.   ಶ್ರೀ ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.   ಪ್ರಾತಃಕಾಲದಲ್ಲಿ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಸಮ್ಮುಖದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಪವಮಾನ ಕಲಶಾಭಿಷೇಕ […]

 (Udupi) ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ಸಂಪನ್ನಗೊಂಡಿತು.

  ಶ್ರೀ ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.

  ಪ್ರಾತಃಕಾಲದಲ್ಲಿ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಸಮ್ಮುಖದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಪವಮಾನ ಕಲಶಾಭಿಷೇಕ ಹೋಮ ಹಾಗೂ ವಿರಜಾ ಹೋಮವನ್ನು ವೇದಮೂರ್ತಿ ಶ್ರೀ ನಟರಾಜ ಉಪಾಧ್ಯಾಯ ಹಾಗೂ ವೇದಮೂರ್ತಿ ಶ್ರೀಅನಿಲ್ ನಡೆಸಿಕೊಟ್ಟರು.

  ತದನಂತರ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಮೃತ್ತಿಕಾ ವೃಂದಾವನಕ್ಕೆ ಪಂಚಾಮೃತಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ಪಿ. ಲಾತವ್ಯ ಆಚಾರ್ಯರು ನೆರವೇರಿಸಿದರು.

   ಅಪರಾಹ್ನ ಅನ್ನಸಂತರ್ಪಣೆ ಜರಗಿತು.

 ಈ ಸಂದರ್ಭದಲ್ಲಿ ಶ್ರೀ ರಾಯರಮಠದ ಜಯತೀರ್ಥ ಆಚಾರ್ಯ, ಅಪ್ಪಣ್ಣಆಚಾರ್ಯ, ಹರಿಕೃಷ್ಣ ಪುನರೂರು, ಲಕ್ಷ್ಮೀನಾರಾಯಣ ತಂತ್ರಿ, ಸೊಂಡೂರು ಪ್ರಹ್ಲಾದ ಆಚಾರ್ಯ, ಪಿ.ವಾದಿರಾಜ ಆಚಾರ್ಯ, ಪಿ. ಶ್ರೀನಿವಾಸ ಆಚಾರ್ಯ, ಪಿ. ವೃಜನಾಥ ಆಚಾರ್ಯ,  ಗೋಪಾಲಕೃಷ್ಣ ಭಟ್ ವಳಕಾಡು, ಡಾ. ವ್ಯಾಸರಾಜ ತಂತ್ರಿ, ಚೆನ್ನೈನ ರಾಜಗೋಪಾಲ್, ರಾಜೇಂದ್ರ ಆಚಾರ್ಯ ಬಡಗುಬೆಟ್ಟು,ಶ್ರೀಪಾದರಪೂರ್ವಾಶ್ರಮದ ಸಹೋದರರು, ಅಕ್ಷೋಭ್ಯ ಆಚಾರ್ಯ, ಅರ್ಜುನ ಆಚಾರ್ಯ, ವಿಶಾಲ ಆಚಾರ್ಯ, ಶಂಕರನಾರಾಯಣ ಹೊಳ್ಳ ಕುಂದಾಪುರ, ಇಮೇಜ್ ಮೊಬೈಲ್ ಸಂಸ್ಥೆಯ  ಯಾದವ, ರಾಕೇಶ್ ಹಾಗೂ ಇನ್ನೂ ಅನೇಕ ಮಹನೀಯರು ಶ್ರೀಪಾದರ ಆರಾಧನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

  ಕೇಮಾರು ಶ್ರೀಸಾಂದೀಪನಿ ಮಠದ ಆಶ್ರಮದಲ್ಲಿ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿಯವರು  ಶಿರೂರು ಶ್ರೀಪಾದರ ಆರಾಧನಾ ನಿಮಿತ್ತ ವಿಶೇಷ ಪೂಜೆ ಹಾಗೂ ಪುಷ್ಪಾರ್ಚನೆಯನ್ನು ಆಯೋಜಿಸಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.