• Home  
  • ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ (Ashtabandha Brahmakalashotsava of Sri Srinivasa Prasanna Someshwara Mahaganapati Temple)
- ಧಾರ್ಮಿಕ

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ (Ashtabandha Brahmakalashotsava of Sri Srinivasa Prasanna Someshwara Mahaganapati Temple)

Share: PHOTO CREDIT : SURABHI RATAN ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ (Udupi) ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತಕ್ಕೆ ಒಳಪಟ್ಟ ಮಣಿಪಾಲ ಪರ್ಕಳದ ಸೌಖ್ಯವನ ಪರೀಕದಲ್ಲಿರುವ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರಗಿತು. ವೇದಮೂರ್ತಿ ಹೆರ್ಗ ಶ್ರೀ ಜಯರಾಮ ತಂತ್ರಿಯವರ ನೇತೃತ್ವದಲ್ಲಿ ಇಂದು ಅಷ್ಟಬಂಧ ಬ್ರಹ್ಮಕಲಶೋತ್ಸವ, ಬ್ರಹ್ಮ ಕುಂಭಾಭಿಷೇಕ ಮತ್ತು ಮಹಾ ಅನ್ನ ಸಂತರ್ಪಣೆ ನೆರವೇರಿತು.  ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ […]

PHOTO CREDIT : SURABHI RATAN

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ

(Udupi) ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತಕ್ಕೆ ಒಳಪಟ್ಟ ಮಣಿಪಾಲ ಪರ್ಕಳದ ಸೌಖ್ಯವನ ಪರೀಕದಲ್ಲಿರುವ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರಗಿತು.

ವೇದಮೂರ್ತಿ ಹೆರ್ಗ ಶ್ರೀ ಜಯರಾಮ ತಂತ್ರಿಯವರ ನೇತೃತ್ವದಲ್ಲಿ ಇಂದು ಅಷ್ಟಬಂಧ ಬ್ರಹ್ಮಕಲಶೋತ್ಸವ, ಬ್ರಹ್ಮ ಕುಂಭಾಭಿಷೇಕ ಮತ್ತು ಮಹಾ ಅನ್ನ ಸಂತರ್ಪಣೆ ನೆರವೇರಿತು.

 ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವಿರೇಂದ್ರ ಹೆಗ್ಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಆಶೀರ್ವಚನ ನೀಡಿದರು.   

ಶ್ರೀ ಎಡನೀರು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಹಾಗೂ ಶ್ರೀ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರು ಅನುಗ್ರಹ ಸಂದೇಶ ನೀಡಿದರು.

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಾಧ್ಯಕ್ಷ ಹರ್ಷೇಂದ್ರ ಕುಮಾರ್‌, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಆತ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ಶೆಟ್ಟಿ, ಸೀತಾರಾಮ ತೋಳ್ಪಾಡಿತ್ತಾಯ, ಡಾ. ಗೋಪಾಲ ಪೂಜಾರಿ, ಡಾ. ಶೋಭಿತ್‌ ಶೆಟ್ಟಿ, ಪ್ರವೀಣ್‌ ಕುಮಾರ್‌, ರಾಜೇಶ್‌ ಕಾರಂತ್‌ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.