ಸಚಿವ ಶಿವರಾಜ್ ತಂಗಡಗಿಗೆ ತಾಕತ್ತಿದ್ದರೆ ಮೋದಿ ಬೆಂಬಲಿಗರನ್ನು ಮುಟ್ಟಿ ನೋಡಲಿ: ಬಿಜೆಪಿ ವಕ್ತಾರ
(Udupi) ಉಡುಪಿ: ಸಚಿವ ಶಿವರಾಜ್ ತಂಗಡಗಿ ಮೋದಿ ಮೋದಿ ಎನ್ನುವ ಮೋದಿ ಬೆಂಬಲಿಸುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿರುವುದು ಖಂಡನೀಯ. ಕಪಾಳಕ್ಕೆ ಹೊಡೆಯುವುದು ದೂರದ ಮಾತು. ಶಿವರಾಜ್ ತಂಗಡಗಿಗೆ (Minister Shivraj Tangadagi) ತಾಕತ್ತಿದ್ದರೆ ಮೋದಿ ಮೋದಿ ಎನ್ನುವ ಕೋಟ್ಯಾಂತರ ಮೋದಿ ಅಭಿಮಾನಿಗಳನ್ನು ಮುಟ್ಟಿ ನೋಡಲಿ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಸವಾಲು ಹಾಕಿದ್ದಾರೆ.
ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯಿಂದ ಕoಗೆಟ್ಟಿರುವ ಕಾಂಗ್ರೆಸ್ಸಿನ ದುಸ್ಥಿತಿ ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲಾ ಎಂಬಂತಾಗಿದೆ. ಅಂದು ಸೋನಿಯಾ ಗಾಂಧಿ ಮೋದಿಯವರನ್ನು ಸಾವಿನ ವ್ಯಾಪಾರಿ ಎಂದಿದ್ದರು. ಖರ್ಗೆ ಮೋದಿಯವರನ್ನು ವಿಷ ಸರ್ಪ ಎಂದಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರಂತೂ ಏಕವಚನದಲ್ಲೇ ಮಾತನಾಡುತ್ತಾರೆ. ಅದರ ಮುಂದುವರೆದ ಬಾಗವಾಗಿ ಈಗ ಕಾಂಗ್ರೆಸ್ ಸಚಿವ ಶಿವರಾಜ್ ತಂಗದಡಿ ಹೇಳಿಕೆ ನೀಡಿದ್ದಾರೆ ಎಂದು
ಚುನಾವಣಾ ಸೋಲಿನ ವಾಸನೆ ಬರುತ್ತಿದ್ದಂತೆ ಕಾಂಗ್ರೆಸ್ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದೆ. ದೇಶದಲ್ಲಿ ಪಾತಾಳಕ್ಕೆ ಕುಸಿದಿರುವ ಕಾಂಗ್ರೆಸ್, ರಾಜ್ಯದಲ್ಲೂ ಪಾತಾಳಕ್ಕಿಳಿಯುವ ಭೀತಿಯಿಂದ ಈ ರೀತಿಯ ಹೊಲಸು ಹೇಳಿಕೆಗಳನ್ನು ನೀಡುತ್ತಿದೆ ಎಂದರು.
ದೇಶದ ಯುವ ಜನತೆ ಮೋದಿ ಆಡಳಿತವನ್ನು ಮೆಚ್ಚಿ ಮೂರನೇ ಬಾರಿಗೆ ಮೋದಿಯವರನ್ನು ಪ್ರಧಾನಿಯನ್ನಾಗಿಸಲು ತೋರುತ್ತಿರುವ ಉತ್ಸಾಹವನ್ನು ಕಾಂಗ್ರೆಸ್ಸಿಗೆ ನೋಡಲಾಗುತ್ತಿಲ್ಲ ಎಂದು ಟೀಕಿಸಿದರು.

