• Home  
  • ಸರಕಾರಿ ಶಾಲಾ ಮಕ್ಕಳಲ್ಲಿ ಕೀಳರಿಮೆ ಸಲ್ಲದು : ವಿವೇಕ್ ಆಳ್ವ (Government school children should not be treated with inferiority: Vivek Alva)
- ಶಾಲಾ ಕಾಲೇಜು - ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಸರಕಾರಿ ಶಾಲಾ ಮಕ್ಕಳಲ್ಲಿ ಕೀಳರಿಮೆ ಸಲ್ಲದು : ವಿವೇಕ್ ಆಳ್ವ (Government school children should not be treated with inferiority: Vivek Alva)

Share: ಸರಕಾರಿ ಶಾಲಾ ಮಕ್ಕಳಲ್ಲಿ ಕೀಳರಿಮೆ ಸಲ್ಲದು : ವಿವೇಕ್ ಆಳ್ವ ಸಾಣೂರು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ (Karkala) ಕಾರ್ಕಳ : ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿನ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ […]

(Karkala) ಕಾರ್ಕಳ : ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿನ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಉದ್ಘಾಟಿಸಿದರು.

ಅವರು ಮಾತನಾಡಿ, ಸರಕಾರಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಎಂದು ಕೀಳರಿಮೆ ಇರಬಾರದು. ಪ್ರತಿಭೆಗಳಿರುವುದು ಹಳ್ಳಿಗಳಲ್ಲಿಯೇ. ಸಮಾಜದಲ್ಲಿ ಸವಾಲನ್ನು ಎದುರಿಸಬಲ್ಲವರು ಸರಕಾರಿ ಶಾಲೆಯಲ್ಲಿ  ಕಲಿತ ವಿದ್ಯಾರ್ಥಿಗಳು. ಮಕ್ಕಳ ಭವಿಷ್ಯದ ಬಗ್ಗೆ ಸದಾ ಚಿಂತಿಸುತ್ತಿರುವ, ಶ್ರಮಪಡುತ್ತಿರುವ ಹೆತ್ತವರನ್ನು ಎಂದೂ ನಿರಾಶೆಗೊಳಿಸದಿರಿ ಎಂದರು.

 ಮುಖ್ಯ ಅತಿಥಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ನೆಲ್ಲಿ, ಇಲ್ಲಿಯ ಮೊಕ್ತೇಸರರಾದ ಸುನಿಲ್ ಕೆ ಆರ್. ರಾಷ್ಟ್ರೀಯತೆ ಮತ್ತು ಸಂಸ್ಕಾರವನ್ನು ಮೂಡಿಸುವ ಶಿಕ್ಷಣ ಅಗತ್ಯವಾಗಿದೆ ಎಂದರು.

 ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು.

  ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಆರೋಗ್ಯ ಅಧಿಕಾರಿಡಾ. ಸಂದೀಪ್ ಕುಡ್ವ, ನ್ಯಾಯವಾದಿ ನಂದಿನಿ ಶೆಟ್ಟಿ, ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅವಿನಾಶ್ ಎ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 ಗೈಡ್ಸ್ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ನಿವೃತ್ತ ಮುಖ್ಯ ಶಿಕ್ಷಕ ವಸಂತ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ  ಸ್ವಾಗತಿಸಿದರು. ಉಪನ್ಯಾಸಕ ಜಗದೀಶ್ ನಿರೂಪಿಸಿದರು. ಪ್ರಾಂಶುಪಾಲೆ ಸುಚೇತಾ ಕಾಮತ್ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.