• Home  
  •   ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ (CM Siddaramaiah – DCM D.K. Shivakumar breakfast meeting)
- ರಾಜಕೀಯ

  ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ (CM Siddaramaiah – DCM D.K. Shivakumar breakfast meeting)

Share: ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್   ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಇಲ್ಲ ಸಿಎಂ, ಡಿಸಿಎಂ ಜಂಟಿ ಹೇಳಿಕೆ (Bengaluru) ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ.      ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಹಗ್ಗಜಗ್ಗಾಟ […]

(Bengaluru) ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ.

     ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, ಈ ನಡುವಲ್ಲೇ ಉಪಹಾರ ಸಭೆ ಸೇರಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಈ ಕುರಿತ ಫೋಟೋ ಹಂಚಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

   ಜಂಟಿಯಾಗಿ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ ಸಿಎಂ ಮತ್ತು ಡಿಸಿಎಂ, ನಾವು ಇಂದು ಮೀಟಿಂಗ್ ಮಾಡಿದ ಉದ್ದೇಶ, ಕೆಲವು ಗೊಂದಲಗಳು ನಿರ್ಮಾಣ ಆಗಿವೆ. ಒಂದು ತಿಂಗಳಿನಿಂದ ಈ ಗೊಂದಲಗಳು ಶುರುವಾಗಿವೆ. ನಾವು ಇಬ್ಬರು ಮಾತನಾಡಿದ್ದೇವೆ. ನಮ್ಮ ಉದ್ದೇಶ 2028 ರ ಚುನಾವಣೆ, ಸ್ಥಳೀಯ ಸಂಸ್ಥೆ, ತಾಲೂಕು, ಜಿಲ್ಲಾ, ಗ್ರಾಮಪಂಚಾಯಿತಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ.

    2023 ರ ವಿಧಾನಸಭೆ ಚುನಾವಣೆ ಹೇಗೆ ನಾವಿಬ್ಬರು ಚರ್ಚೆ ಮಾಡಿದ್ದೇವೆ ಹಾಗೆಯೇ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ. ಒಟ್ಟಿಗೆ ಹೋಗುತ್ತೇವೆ. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಇಲ್ಲ. ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಶುರುವಾಗಲಿದೆ. ವಿರೋಧ ಪಕ್ಷದವರನ್ನು ಬಹಳ ಸಮರ್ಥವಾಗಿ ಎದುರಿಸುತ್ತೇವೆ. ಸುಳ್ಳು ಅಪಪ್ರಚಾರಗಳನ್ನು, ಸುಳ್ಳು ಆರೋಪ ಮಾಡುವುದು ಬಿಜೆಪಿಯ ಚಾಳಿ, ಹೀಗಾಗಿ ಇವರನ್ನು ಸಮರ್ಥವಾಗಿ ನಾವಿಬ್ಬರೂ ಚುನಾವಣೆ  ಎದುರಿಸುತ್ತೇವೆ ಎಂದು ಹೇಳಿದ್ದಾರೆ.

   ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ನಾವಿಬ್ಬರು ಕೇಳುತ್ತೇವೆ. ಇದೀಗ ಇರುವ ಗೊಂದಲಗಳ ಬಗ್ಗೆ ಏನೂ ಮಾತನಾಡಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ. ಡಿಕೆ ಶಿವಕುಮಾರ್‌ ಹೇಳಿದ್ದಾರೆ.

    ಬ್ರೇಕ್ ಫಾಸ್ಟ್ ಚೆನ್ನಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಇಂದು ನಮ್ಮ ಮನೆಗೆ ಬಂದಿದ್ದರು. ಒಟ್ಟಿಗೆ ಬ್ರೇಕ್ ಫಾಸ್ಟ್ ಒಟ್ಟಿಗೆ ಮಾಡಿದ್ದೇವೆ. ಹೈಕಮಾಂಡ್ ಮೊನ್ನೆ ಪೊನ್ನಣ್ಣರಿಗೆ ಕರೆ ಮಾಡಿದ್ದರು. ಡಿ.ಕೆ.ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಕರೆಯಿರಿ ಎಂದು ಹೇಳಿದ್ದರು. ಡಿ.ಕೆ. ಶಿವಕುಮಾರ್ ಅವರಿಗೂ ಇದನ್ನು ಹೇಳಿದ್ದರು. ಡಿ.ಕೆ. ಶಿವಕುಮಾರ್ ಅವರು ತಮ್ಮ ಮನೆಗೆ ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಇನ್ನೊಂದಿನ ನಿಮ್ಮ ಮನೆಗೆ ಊಟಕ್ಕೆ ಬರ್ತಿನಿ ಅಂತ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

  ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ. ರಾಜಕೀಯವಾಗಿ ನಮ್ಮಿಬ್ಬರದು ಒಂದೇ ತೀರ್ಮಾನವಾಗಿದೆ. ನಮ್ಮಲ್ಲಿ ಯಾವ ಗುಂಪುಗಾರಿಕೆಯೂ ಇಲ್ಲ. ಹೈಕಮಾಂಡ್ ಹೇಳಿದಂತೆ ನಡೆಯುತ್ತೇವೆ ಎಂದರು.

 ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.