• Home  
  • ಸಿಟಿ ರವಿಯನ್ನುರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ
- ರಾಜಕೀಯ

ಸಿಟಿ ರವಿಯನ್ನುರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ

Share: ಸಿಟಿ ರವಿಯನ್ನುರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ  ಬೆಂಗಳೂರು: ರಾಜ್ಯ ಬಿಜೆಪಿ ನಾಯಕ ಸಿಟಿ ರವಿ ಅವರಿಗೆ ಬಿಜೆಪಿ ಬಿಗ್ ಶಾಕ್ ನೀಡಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ನೀಡಲಾಗಿದೆ. ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ತಮ್ಮ ತಂಡವನ್ನು ಪುನರ್ ರಚಿಸಿ, ಹೊಸ ತಂಡವನ್ನು ಕಟ್ಟುತ್ತಿದ್ದಾರೆ.   ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಯಾಗಿದ್ದ ಸಿಟಿ ರವಿಗೆ ಕೊಕ್ ನೀಡಲಾಗಿದೆ. ಜೊತೆಗೆ ಬಿಎಲ್ ಸಂತೋಷ್ […]

ಸಿಟಿ ರವಿಯನ್ನುರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ

 ಬೆಂಗಳೂರು: ರಾಜ್ಯ ಬಿಜೆಪಿ ನಾಯಕ ಸಿಟಿ ರವಿ ಅವರಿಗೆ ಬಿಜೆಪಿ ಬಿಗ್ ಶಾಕ್ ನೀಡಿದೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ನೀಡಲಾಗಿದೆ. ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ತಮ್ಮ ತಂಡವನ್ನು ಪುನರ್ ರಚಿಸಿ, ಹೊಸ ತಂಡವನ್ನು ಕಟ್ಟುತ್ತಿದ್ದಾರೆ.

  ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಯಾಗಿದ್ದ ಸಿಟಿ ರವಿಗೆ ಕೊಕ್ ನೀಡಲಾಗಿದೆ. ಜೊತೆಗೆ ಬಿಎಲ್ ಸಂತೋಷ್ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಕೆ ಮಾಡಲಾಗಿದೆ. ಇನ್ನು ಸಿಟಿ ರವಿ ಅವರನ್ನು ಕಳಗಿಳಿಸಿದ ಬೆನ್ನಲ್ಲೇ ಹೈಕಮಾಂಡ್ ನಡೆ ಭಾರೀ ಚರ್ಚೆಗೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.  

 ಈಗಾಗಲೇ ನಳಿನ್ ಕುಮಾರ್ ಕಟೀಲ್ ಅವರ ರಾಜ್ಯಾಧ್ಯಕ್ಷ ಸ್ಥಾನದ ಅವಧಿ ಮುಕ್ತಾಯಗೊಂಡಿದೆ. ಹೀಗಾಗಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಯಾರು ಆಗ್ತಾರೆ ಎನ್ನುವ ಕುತೂಹಲ ಮೂಡಿಸಿದೆ.

 ಸಿಟಿ ರವಿ ಕೂಡ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್ನಲಾಗಿದೆ. ಹೀಗಾಗಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸ್ಥಾನದಿಂದ ಕಳಗೆ ಇಳಿಸಿ, ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಾರೆಯೇ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.