• Home  
  • ಸುಳ್ಯ;ಕಾರು & ಲಾರಿ ನಡುವೆ ಭೀಕರ ಅಪಘಾತ:ಓರ್ವ ಮೃತ್ಯು, ನಾಲ್ವರಿಗೆ ಗಂಭೀರ ಗಾಯ
- ಅಪರಾಧ

ಸುಳ್ಯ;ಕಾರು & ಲಾರಿ ನಡುವೆ ಭೀಕರ ಅಪಘಾತ:ಓರ್ವ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

Share: ಸುಳ್ಯ:ಸ್ವಿಫ್ಟ್ ಕಾರಿಗೆ ನಿಯಂತ್ರಣ ಕಳೆದುಕೊಂಡ ಕಂಟೈನರ್ ಲಾರಿ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಡು, ನಾಲ್ವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ದೇವರ ಕೊಲ್ಲಿ ತಿರುವಿನಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಮಂಗಳೂರಿನ ಕುಳಾಯಿ ನಿವಾಸಿ ಈಶ್ವರ (42), ಕಾರಿನಲ್ಲಿದ್ದ ಪ್ರಯಾಣಿಕರಾದ ಚಂದ್ರಶೇಖರ, ನಿತಿನ್, ಜಗದೀಶ್ ಹಾಗೂ ಹರ್ಷ ಎಂಬವರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಈಶ್ವರ, ಚಂದ್ರಶೇಖರ ಮತ್ತು ನಿತಿನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, […]

ಸುಳ್ಯ:ಸ್ವಿಫ್ಟ್ ಕಾರಿಗೆ ನಿಯಂತ್ರಣ ಕಳೆದುಕೊಂಡ ಕಂಟೈನರ್ ಲಾರಿ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಡು, ನಾಲ್ವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ದೇವರ ಕೊಲ್ಲಿ ತಿರುವಿನಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ನಿವಾಸಿ ರವಿ ಎಂದು ಗುರುತಿಸಲಾಗಿದೆ.

ಲಾರಿ ಚಾಲಕ ಮಂಗಳೂರಿನ ಕುಳಾಯಿ ನಿವಾಸಿ ಈಶ್ವರ (42), ಕಾರಿನಲ್ಲಿದ್ದ ಪ್ರಯಾಣಿಕರಾದ ಚಂದ್ರಶೇಖರ, ನಿತಿನ್, ಜಗದೀಶ್ ಹಾಗೂ ಹರ್ಷ ಎಂಬವರು ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ ಈಶ್ವರ, ಚಂದ್ರಶೇಖರ ಮತ್ತು ನಿತಿನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಂಟೈನರ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು.ಕಾರು ಧರ್ಮಸ್ಥಳದಿಂದ ಸಂಪಾಜೆ ಮೂಲಕ ಮಡಿಕೇರಿಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ.

ಸುಳ್ಯ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿಯ ಬ್ರೇಕ್ ವೈಫಲ್ಯಗೊಂಡು ಎದುರಿನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದು ಘಟನೆ ನಡೆದಿದೆ.

ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.