ಸೂಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಚಿತ ಟ್ಯೂಷನ್ ಕ್ಲಾಸ್ ತರಬೇತಿ (Sooda : Sri Kshethra Dharmasthala Gramabhivruddi Yojane : Free Tution Class Training)
ಸೂಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಚಿತ ಟ್ಯೂಷನ್ ಕ್ಲಾಸ್ ತರಬೇತಿ
(Kaup) ಕಾಪು ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಮಹಿಳಾ ಜ್ಞಾನವಿಕಾಸ ಇದರ ಆಯೋಜನೆಯಲ್ಲಿ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಸೂಡದಲ್ಲಿ ನೆರವೇರಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಬೆಳ್ಮಣ್ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮೇಶ್ವರಿ ಶೆಟ್ಟಿಯವರು ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಪು ತಾಲೂಕು ಜನಜಾಗ್ರತಿ ವೇದಿಕೆಯ ಉಪಾಧ್ಯಕ್ಷ ಶಂಕರ್ ಕುಂದರವರು ಭಾಗವಹಿದ್ದರು.
ಅವರು ಮಾತನಾಡಿ, ವಿದ್ಯಾರ್ಥಿಗಳು ಟ್ಯೂಷನ್ ಕ್ಲಾಸಿನ ಸದುಪಯೋಗ ಪಡೆದು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತರಬೇಕೆಂದು ಹಾರೈಸಿದರು.
ಶಾಲಾ ಶಿಕ್ಷಕರಾಗಿರುವ ರಮೇಶ್ ಶಾಸ್ತ್ರಿ ಮಾತನಾಡಿ, ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ವಿವಿಧ ರೀತಿಯ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತ ಪಡಿಸಿದರು.