• Home  
  • ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕಾಪು ಶಾಸಕರ ಸಹಿತ ಶಾಸಕರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ
- ಅಪರಾಧ - ಕರಾವಳಿ

ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕಾಪು ಶಾಸಕರ ಸಹಿತ ಶಾಸಕರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ

Share: ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ಕಾಪು ಶಾಸಕರ ಸಹಿತ ಶಾಸಕರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ ಬೆಂಗಳೂರು: ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಯವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಸೋಮವಾರ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.   ಮನವಿ ಸ್ವೀಕರಿಸಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. […]

ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ಕಾಪು ಶಾಸಕರ ಸಹಿತ ಶಾಸಕರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ

ಬೆಂಗಳೂರು: ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಯವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಸೋಮವಾರ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

  ಮನವಿ ಸ್ವೀಕರಿಸಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನಿಮ್ಮ ಮನವಿಯಂತೆ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಕಾರ್ಕಳ ಶಾಸಕ ಸುನೀಲ್‌ ಕುಮಾರ್‌, ದಕ ಜಿಲ್ಲಾ ಶಾಸಕರಾದ ವೇದವ್ಯಾಸ ಕಾಮತ್‌, ಡಾ, ವೈ ಭರತ್‌ ಶೆಟ್ಟಿ, ಹರೀಶ್‌ ಪೂಂಜಾ, ಭಾಗೀರಥಿ ಮುರುಳ್ಯ ಉಪಸ್ತಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.