• Home  
  • ಸ್ಕೌಟ್ಸ್​ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ ಸೇರ್ಪಡೆ ಚಿಂತನೆ : ಪಿ ಜಿ ಆರ್ ಸಿಂದ್ಯಾ (Thinking of including yoga, pranayama, meditation in scouts activities: PGR Scindia)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಸ್ಕೌಟ್ಸ್​ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ ಸೇರ್ಪಡೆ ಚಿಂತನೆ : ಪಿ ಜಿ ಆರ್ ಸಿಂದ್ಯಾ (Thinking of including yoga, pranayama, meditation in scouts activities: PGR Scindia)

Share: ಸ್ಕೌಟ್ಸ್​ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ ಸೇರ್ಪಡೆ ಚಿಂತನೆ : ಪಿ ಜಿ ಆರ್ ಸಿಂದ್ಯಾ  ಭಾರತ್​ ಸ್ಕೌಟ್ಸ್​ ಮತ್ತು ಗೈಡ್ಸ್​ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್​. ಸಿಂಧ್ಯಾ (Udupi) ಉಡುಪಿ: ಸ್ಕೌಟ್ಸ್​ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸೇರ್ಪಡೆಗೊಳಿಸುವ ಚಿಂತನೆ ಇದೆ. ಇದರಿಂದ ಮಕ್ಕಳ ಜ್ಞಾಪನಾ ಸಾಮರ್ಥ್ಯವೂ ವೃದ್ಧಿಸಲಿದೆ ಎಂದು ಭಾರತ್​ ಸ್ಕೌಟ್ಸ್​ ಮತ್ತು ಗೈಡ್ಸ್​ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್​. ಸಿಂಧ್ಯಾ ಹೇಳಿದರು.  ಉಡುಪಿ ಬೋರ್ಡ್​ ಹೈಸ್ಕೂಲಿನಲ್ಲಿ ಜಿಲ್ಲಾಡಳಿತ, ಶಾಲಾ ಶಿಕ್ಷಣ […]

(Udupi) ಉಡುಪಿ: ಸ್ಕೌಟ್ಸ್​ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸೇರ್ಪಡೆಗೊಳಿಸುವ ಚಿಂತನೆ ಇದೆ. ಇದರಿಂದ ಮಕ್ಕಳ ಜ್ಞಾಪನಾ ಸಾಮರ್ಥ್ಯವೂ ವೃದ್ಧಿಸಲಿದೆ ಎಂದು ಭಾರತ್​ ಸ್ಕೌಟ್ಸ್​ ಮತ್ತು ಗೈಡ್ಸ್​ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್​. ಸಿಂಧ್ಯಾ ಹೇಳಿದರು.

 ಉಡುಪಿ ಬೋರ್ಡ್​ ಹೈಸ್ಕೂಲಿನಲ್ಲಿ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಭಾರತ್​ ಸೌಟ್ಸ್​ ಮತ್ತು ಗೈಡ್ಸ್​ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿಪೂರ್ವ, ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕ- ಮತ್ತು ಉಪನ್ಯಾಸಕಿಯರಿಗೆ  ರೋವರಿಂಗ್​ ಮತ್ತು ರೇಂಜರಿಂಗ್​ ಪ್ರಾರಂಭಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು.

  ರೋವರ್ಸ್​ ಮತ್ತು ರೇಂಜರ್ಸ್​ಗಳಿಗೆ ಶಿಸ್ತು ಮತ್ತು ಸಮಯಪ್ರಜ್ಞೆ ಬಹಳ ಮುಖ್ಯ. ಇಲ್ಲದಿದ್ದರೆ ದೇಶದ ಪ್ರಗತಿ ಸಾಧ್ಯವಿಲ್ಲ. ಕಮ್ಯುನಿಸ್ಟ್‌ ರಾಷ್ಟ್ರಗಳಲ್ಲಿ ಜನರು ಶಿಸ್ತು ಮತ್ತು ಸಮಯ ಪ್ರಜ್ಞೆ ಅಳವಡಿಸಿಕೊಂಡಿದ್ದರಿಂದ ಆರ್ಥಿಕವಾಗಿ ಪ್ರಬಲರಾಗಿದ್ದಾರೆ ಎಂದು ತಿಳಿಸಿದರು.  

 ಜಿಲ್ಲೆಯ ಮಹಾನ್​ ಮುತ್ಸದ್ದಿ ಡಾ. ವಿ.ಎಸ್​. ಆಚಾರ್ಯ ಅವರು ಭಾರತ್​ ಸ್ಕೌಟ್ಸ್​ ಆ್ಯಂಡ್​ ಗೈಡ್ಸ್​ ಸಂಸ್ಥೆಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಎಲ್ಲಾ ಕಾಲೇಜುಗಳಲ್ಲಿ  ಭಾರತ್​ ಸೌಟ್ಸ್​ ಮತ್ತು ಗೈಡ್ಸ್​ ಕಡ್ಡಾಯಗೊಳಿಸಿದ್ದರು ಎಂದು ಶ್ಲಾಘಿಸಿದರು.

 ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ ಭಟ್​,  ಡಿಡಿಪಿಯು ಮಾರುತಿ, ಪಪೂ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ವರ್ಗೀಸ್​ ಪಿ., ಜಿಲ್ಲಾ ಸ್ಕೌಟ್ಸ್​ ಆಯುಕ್ತ ಜನಾರ್ದನ ಕೊಡವೂರು, ಗೈಡ್ಸ್​ ಆಯುಕ್ತೆ ಜ್ಯೋತಿ ಪೈ,  ಖಜಾಂಚಿ ಹರಿಪ್ರಸಾದ್​ ರೈ, ಶಿಬಿರ ನಾಯಕ ಗುರುಮೂರ್ತಿ,  ಜಿಲ್ಲಾ ಕಾರ್ಯದರ್ಶಿ ಆನಂದ್​ ಅಡಿಗ, ರಾಜ್ಯ ಸಂಘಟನಾ ಸಹ ಕಾರ್ಯದರ್ಶಿ ಸುಮನ್ ಶೇಖರ್, ಕಾಲೇಜು ಪ್ರಾಂಶುಪಾಲೆ ಲೀಲಾವತಿ ಮೊದಲಾದವರು ಉಪಸ್ಥಿತರಿದ್ದರು.

 ಉದಯ ಭಾಸ್ಕರ್ ಶೆಟ್ಟಿ ನಿರೂಪಿಸಿದರು. ಹರೀಶ್ ಧನ್ಯವಾದವಿತ್ತರು.

Leave a comment

Your email address will not be published. Required fields are marked *

eMedia Kannada  @2025. All Rights Reserved.