ಸ.ಹಿ.ಪ್ರಾ ಶಾಲೆ ಬೆಳಪು ವಿವೇಕ ಶಾಲಾ ಕೊಠಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ
(Belapu) ಬೆಳಪು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು ಇದರ ವಿವೇಕ ಶಾಲಾ ಕೊಠಡಿಗೆ 13.90 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme suresh Shetty) ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್(EX MLA Lalaji Mendon) , ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ (DR Deviprasad Shetty), ಶಾಲಾ ಮುಖ್ಯೋಪಾಧ್ಯಾಯರಾದ ರಜನಿ, ಬೆಳಪು ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

