ಹವ್ಯಕ ಕೃಷಿ ರತ್ನ”ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆ” (Sawmya Pernaje got “Havyaka Krishi Rathna” Award)
ಹವ್ಯಕ ಕೃಷಿ ರತ್ನ”ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆ”
ಡಿ. 27-29 ಬೆಂಗಳೂರು ಅರಮನೆ ಮೈದಾನದಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
(Putturu) ಪುತ್ತೂರು, ಪೆರ್ನಾಜೆ : ಬೆಂಗಳೂರು ಅರಮನೆ ಮೈದಾನದಲ್ಲಿ ಡಿ .27ರಿಂದ 29 ರವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ “ಹವ್ಯಕ ಕೃಷಿ ರತ್ನ” ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆಯಾಗಿರುತ್ತಾರೆ.
ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಸಂಚಾಲಕರಾದ ಗಣೇಶ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿಗೆ ಪ್ರಥಮವಾಗಿ ಮಹಿಳಾ ಜೇನುಗಡ್ಡದಾರಿ ಸೌಮ್ಯ ಪೆರ್ನಾಜೆ ಆಯ್ಕೆ ಆಗಿದ್ದಾರೆ.
ಕಲಾ ನಿರ್ದೇಶಕ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕುಮಾರ್ ಪೆರ್ನಾಜೆಯವರ ಪತ್ನಿ ಸೌಮ್ಯಾರವರ ಕುಟುಂಬ ಅಪಾಯಕಾರಿ ಜೇನು ಸಾಕಣೆ ಕೃಷಿಯಲ್ಲಿ ತೊಡಗಿಸಿಕೊಂಡಿದೆ.
ಸೌಮ್ಯಾರವರಿಗೆ ಗಡಿನಾಡ ದ್ವನಿ, “ಮಧುಭೂಷಣ” ರಾಜ್ಯ ಪ್ರಶಸ್ತಿ ಸಹಿತ ಹತ್ತು ಹಲವು ಪ್ರಶಸ್ತಿ ಲಭಿಸಿದೆ.