ಹಾಸನದ ನಡುರಸ್ತೆಯಲ್ಲಿ ಅಟ್ಟಾಡಿಸಿ ಯುವಕನ ಬರ್ಬರ ಕೊಲೆ; ಬೆಚ್ಚಿಬಿದ್ದ ಜನರು
ಹಾಸನ; ಹಾಡಹಗಲೇ ನುಡುರಸ್ತೆಯಲ್ಲಿ ಅಟ್ಟಾಡಿಸಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. .
ಮಾಸ್ತಿಗೌಡ (30) ಕೊಲೆಯಾದ ರೌಡಿಶೀಟರ್.
ಈ ಘಟನೆಯು ಹಾಸನ ಜಿಲ್ಲೆಯ, ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ ಮುಂಭಾಗ ಘಟಿಸಿದೆ.
ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ಯುವಕರ ಗುಂಪು ಈ ಕೃತ್ಯ ಎಸಗಿದೆ ಎನ್ನಲಾಗಿದೆ.
ಮಾಸ್ತಿಗೌಡ ಚನ್ನರಾಯಪಟ್ಟಣ ತಾಲ್ಲೂಕಿನ ಹೊನ್ನಮಾರನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಈತ ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
ಪೊಲೀಸರುಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

