# Tags
#ಅಪರಾಧ

ಹಾಸನ : ಈಜಲು ತೆರಳಿದ್ದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು (Hasana: 4 Children who had gone swimming drawned in the lake)

ಹಾಸನ : ಈಜಲು ತೆರಳಿದ್ದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು

 ಹಾಸನ : ಕೆರೆಗೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ಆಲೂರು ತಾಲ್ಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಘಟಿಸಿದೆ.

ಜೀವನ್ (13), ಸಾತ್ವಿಕ್ (11). ವಿಶ್ವ(12), ಪೃಥ್ವಿ (12 )ಮೃತ ದುರ್ದೈವಿ ಮಕ್ಕಳು.

 ಮೃತ ಮಕ್ಕಳು ಮುತ್ತಿಗೆ ಗ್ರಾಮದವರಾಗಿದ್ದು. ಇಂದು ಐವರು ಬಾಲಕರು ಈಜಲು ತೆರಳಿದ್ದರು. ಕೆರೆಯಲ್ಲಿ ನಾಲ್ವರು ಮುಳುಗುತ್ತಿರುವ ಸಂದರ್ಭದಲ್ಲಿ ಬದುಕುಳಿದ ಬಾಲಕ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದು, ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರೂ ನೀರಿನಲ್ಲಿ ಮುಳುಗಿದ್ದರು.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ದೌಡಯಿಸಿದ್ದು, ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಘಟನಾ ಸ್ಥಳದಲ್ಲಿ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಆಗಮಿಸಿ ಮೃತ ಮಕ್ಕಳ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದಾರೆ.

 ಆಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2