# Tags
#ಅಪಘಾತ

  ಹಾಸನ : ಜೀಪಿನ ಟಯರ್‌ ಸ್ಫೋಟ, ಐಪಿಎಸ್ ಅಧಿಕಾರಿ ಧಾರುಣ ಸಾವು (Hasana : Jeep tyre explosion, IPS Officer dies bravely)

  ಹಾಸನ : ಜೀಪಿನ ಟಯರ್ಸ್ಫೋಟ, ಐಪಿಎಸ್ ಅಧಿಕಾರಿ ಧಾರುಣ ಸಾವು

(Hasana) ಹಾಸನ: ಟಯರ್‌ ಸ್ಫೋಟಗೊಂಡು  ಪೊಲೀಸ್‌ ಜೀಪ್‌ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಸಾವಿಗೀಡಾದ ಧಾರುಣ ಘಟನೆ ಹಾಸನದ ಕಿತ್ತಾನೆ ಗಡಿ ಭಾಗದಲ್ಲಿ ಘಟಿಸಿದೆ.

ಮೃತ ಅಧಿಕಾರಿಯನ್ನು ಮಧ್ಯಪ್ರದೇಶ ಮೂಲದ ಹರ್ಷವರ್ಧನ ಎಂದು ಗುರುತಿಸಲಾಗಿದೆ.

ಮೈಸೂರಿನ ಕೆಪಿಎನಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.

ಹರ್ಷವರ್ಧನ ಅವರು ಹಾಸನ ಜಿಲ್ಲೆಗೆ ನಿಯೋಜನೆ ಗೊಂಡಿದ್ದರು. ಭಾನುವಾರ ಸಂಜೆ ವರದಿ ಮಾಡಿಕೊಳ್ಳಲು ಹೊಳೆನರಸೀಪುರ ಕಡೆಯಿಂದ ಜೀಪ್‌ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಕಿತ್ತಾನೆಗಡಿ ಬಳಿ ಜೀಪ್‌ನ ಟಯರ್ ಸ್ಫೋಟಗೊಂಡಿದೆ. ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ.

ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಧಿಕಾರಿ ಮತ್ತು ಚಾಲಕನನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2