• Home  
  • ಹಿರಿಯ ಕಾಂಗ್ರೆಸ್ ಮುಖಂಡ , ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ (Senior Conress leader, Katapadi Beedu Vinaya Ballal passed away)
- ನಿಧನ

ಹಿರಿಯ ಕಾಂಗ್ರೆಸ್ ಮುಖಂಡ , ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ (Senior Conress leader, Katapadi Beedu Vinaya Ballal passed away)

Share:  ಹಿರಿಯ ಕಾಂಗ್ರೆಸ್ ಮುಖಂಡ , ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ ಕಟಪಾಡಿ, ಆ.28:  ಹಿರಿಯ ಕಾಂಗ್ರೆಸ್ ಮುಖಂಡ  ಕಟಪಾಡಿ ಬೀಡು ವಿನಯ ಬಲ್ಲಾಳ್ (63) ಅವರು ಹೃದಯಾಘಾತದಿಂದ ಬುಧವಾರ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿರುತ್ತಾರೆ.  ಮೃತರು ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ಮಾಜಿ ಪ್ರಧಾನ ಕಾರ್ಯದರ್ಶಯಾಗಿ, ಹಾಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸಿದ್ದರು. ಕಟಪಾಡಿ ಗ್ರಾ.ಪಂನ ಮಾಜಿ ಅಧ್ಯಕ್ಷರಾಗಿ, ಕಟಪಾಡಿ ಬಂಟರ ಸಂಘದ ಮಾಜಿ […]

 ಹಿರಿಯ ಕಾಂಗ್ರೆಸ್ ಮುಖಂಡ , ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ

ಕಟಪಾಡಿ, ಆ.28:  ಹಿರಿಯ ಕಾಂಗ್ರೆಸ್ ಮುಖಂಡ  ಕಟಪಾಡಿ ಬೀಡು ವಿನಯ ಬಲ್ಲಾಳ್ (63) ಅವರು ಹೃದಯಾಘಾತದಿಂದ ಬುಧವಾರ ನಿಧನ ಹೊಂದಿದರು.

ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿರುತ್ತಾರೆ.

 ಮೃತರು ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ಮಾಜಿ ಪ್ರಧಾನ ಕಾರ್ಯದರ್ಶಯಾಗಿ, ಹಾಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸಿದ್ದರು.

ಕಟಪಾಡಿ ಗ್ರಾ.ಪಂನ ಮಾಜಿ ಅಧ್ಯಕ್ಷರಾಗಿ, ಕಟಪಾಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು, ಕಟಪಾಡಿ ಬೀಡು ಕಂಬಳ ಸಮಿತಿ, ಸ್ಥಳೀಯ ದೇವಸ್ಥಾನ, ದೈವಸ್ಥಾನಗಳಲ್ಲಿ  ಜೀರ್ಣೋದ್ಧಾರ  ಸಹಿತ ಸಮಿತಿಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

ಮರದ ಮಿಲ್‌ ಉದ್ಯಮಿಯಾಗಿದ್ದು, ಕೊಡುಗೈ ದಾನಿಯಾಗಿ ಗುರುತಿಸಿಕೊಂಡು ಜನಾನುರಾಗಿಯಾಗಿದ್ದರು.

ಸಂತಾಪ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಕೋಆರ್ಡಿನೇಟರ್ ನವೀನ್‌ಚಂದ್ರ ಜೆ. ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಕಟಪಾಡಿ ಗ್ರಾ. ಪಂ. ಅಧ್ಯಕ್ಷೆ ಪ್ರಭಾ ಬಿ. ಶೆಟ್ಟಿ, ಜಿಲ್ಲಾ ಮತ್ತು ಕಾಪು ಬ್ಲಾಕ್ ಕಾಂಗ್ರೇಸ್ ವಿವಿಧ ಸ್ತರಗಳ ಪದಾಧಿಕಾರಿಗಳು, ಮುಖಂಡರು, ಸಂತಾಪ ಸೂಚಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.