ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ
ಭಾನುವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ
(Udupi) ಉಡುಪಿ, ಎ.19: ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ 21 ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.
ಗಣೇಶ್ ಪ್ರಭುರವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಜಿ ಕುರ್ಯ ಮತ್ತು ಸದಸ್ಯರು, ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿ, ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್ ಶರೀಫ್ ಮತ್ತು ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

