ಹೆಜಮಾಡಿ : ಕಾರಿಗೆ ಲಾರಿ ಡಿಕ್ಕಿ, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪಡುಬಿದ್ರಿ ಪೊಲೀಸರು
(Hejamady) ಹೆಜಮಾಡಿ: ಉಡುಪಿ ಕಡೆಗೆ ಸಾಗುತ್ತಿದ್ದ ಕಾರಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿಯಾಗಿ ಕಾರು ಜಖಂಗೊಂಡು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ಸಂಜೆ ಹೆಜಮಾಡಿ ಪೆಟ್ರೋಲ್ ಪಂಪ್ ಬಳಿ ಘಟಿಸಿದೆ.
ಉಡುಪಿ ಕಡೆಗೆ ಸಾಗುತ್ತಿದ್ದ ಕಾರಿಗೆ ವೇಗವಾಗಿ ಉಡುಪಿ ಕಡೆ ಸಾಗುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಡಿವೈಡರ್ ಏರಿ ರಸ್ತೆ ನಿಯಮದ ಕಂಬಕ್ಕೆ ಡಿಕ್ಕಿಯಾಗಿ ತಿರುಗಿ ನಿಂತಿದೆ.
ಈ ಸಂದರ್ಭ ಮಂಗಳೂರು ಹಾಗೂ ಉಡುಪಿ ಕಡೆಯ ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿದ್ದರಿಂದ ಸಂಭಾವ್ಯ ಅಪಘಾತ ತಪ್ಪಿದೆ.
ಹೆಜಮಾಡಿ ಟೋಲ್ ಸಿಬ್ಬಂದಿ ಆಗಮಿಸಿ ಎರಡೂ ವಾಹನಗಳನ್ನು ಪಕ್ಕಕ್ಕೆ ಸರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.
ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

