ಹೆಜಮಾಡಿ ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 5 ಜೊತೆ ಬೆಂಚು ಡೆಸ್ಕ್ ವಿತರಣೆ
(Hejamdy) ಹೆಜಮಾಡಿ: ಹೆಜಮಾಡಿ ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯ ವತಿಯಿಂದ 5ಜೊತೆ ಬೆಂಚು ಡೆಸ್ಕ್ಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಯ ಕಾಪು ತಾಲೂಕು ಯೋಜನಾಧಿಕಾರಿ ಮಮತ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಹಾಗೂ ಹೆಜಮಾಡಿ ಮಹಾಲಿಂಗೇಶ್ವರ ದೇಗುಲದ ಮೊಕ್ತೇಸರ ದಯಾನಂದ ಹೆಜಮಾಡಿ, ಜನಜಾಗೃತಿ ವೇದಿಕೆ ಸದಸ್ಯರಾದ ಸುಧಾಕರ ಕರ್ಕೇರ, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಹಮದ್ ಸಾದಿಕ್, ಹೆಜಮಾಡಿ B ಒಕ್ಕೂಟ ಅಧ್ಯಕ್ಷೆ ಪವಿತ್ರ ಗಿರೀಶ್, ನಿವೃತ್ತ ಮುಖ್ಯ ಶಿಕ್ಷಕರಾದ ಸಂಜೀವ T, ಶಾಲಾ ಮುಖ್ಯ ಶಿಕ್ಷಕಿ ಆಶಾಲತಾ, ಸಹ ಶಿಕ್ಷಕ ವೃಂದ, ಪಡುಬಿದ್ರಿ ಮೇಲ್ವಿಚಾರಕಾರದ ಸರಿತಾ, ಹೆಜಮಾಡಿ B ಒಕ್ಕೂಟ ಸೇವಾಪ್ರತಿನಿಧಿ ತಾರಾ ಉಪಸ್ಥಿತರಿದ್ದರು.

