• Home  
  • ಹೆಜಮಾಡಿ : ಟೋಲ್‌ಗೇಟ್‌ ಬಳಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರಿಗೆ ಗಾಯ(Hejamadi: Car hits lorry parked near tollgate, two injured)
- ಅಪಘಾತ

ಹೆಜಮಾಡಿ : ಟೋಲ್‌ಗೇಟ್‌ ಬಳಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರಿಗೆ ಗಾಯ(Hejamadi: Car hits lorry parked near tollgate, two injured)

Share: ಹೆಜಮಾಡಿ : ಟೋಲ್‌ಗೇಟ್‌ ಬಳಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರಿಗೆ ಗಾಯ (Hejmadi) ಹೆಜಮಾಡಿ: ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಡಿಕ್ಕಿಯಾದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು  ಗಾಯಗೊಂಡ ಘಟನೆ ಇಂದು ಬೆಳಗ್ಗಿನ ಜಾವ ನಾಲ್ಕಉ ಗಂಟೆಯ ಸುಮಾರಿಗೆ ಘಟಿಸಿದೆ.   ಗಾಯಗೊಂಡವರು ಕೋಡಿಕರೆ ನಿವಾಸಿ ಲೋಕೇಶ್ (43) ಹಾಗೂ ಕುಳಾಯಿ ನಿವಾಸಿ ವಿರಾಜ್(29) ಗಾಯಗೊಂಡವರು.  ಇವರು ಯಾವುದೋ ಕಾರ್ಯಕ್ರಮಕ್ಕೆ ತೆರಳಿ ಬೆಳಗ್ಗಿನ ಜಾವ ವಾಪಾಸಾಗುತ್ತಿದ್ದಾಗ, ಈ […]

(Hejmadi) ಹೆಜಮಾಡಿ: ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಡಿಕ್ಕಿಯಾದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು  ಗಾಯಗೊಂಡ ಘಟನೆ ಇಂದು ಬೆಳಗ್ಗಿನ ಜಾವ ನಾಲ್ಕಉ ಗಂಟೆಯ ಸುಮಾರಿಗೆ ಘಟಿಸಿದೆ.

  ಗಾಯಗೊಂಡವರು ಕೋಡಿಕರೆ ನಿವಾಸಿ ಲೋಕೇಶ್ (43) ಹಾಗೂ ಕುಳಾಯಿ ನಿವಾಸಿ ವಿರಾಜ್(29) ಗಾಯಗೊಂಡವರು.

 ಇವರು ಯಾವುದೋ ಕಾರ್ಯಕ್ರಮಕ್ಕೆ ತೆರಳಿ ಬೆಳಗ್ಗಿನ ಜಾವ ವಾಪಾಸಾಗುತ್ತಿದ್ದಾಗ, ಈ ಘಟನೆ ಘಟಿಸಿದೆ.

ಮರ ದಿಮ್ಮಿಗಳನ್ನು ಹೇರಿಕೊಂಡಿದ್ದ ಲಾರಿಯನ್ನು  ಹೆಜಮಾಡಿ ಟೋಲ್ ಗೇಟಿನ ಕೆಲವೆ ಮೀಟರ್ ಗಳ ಅಂತರದಲ್ಲಿ ಪಾರ್ಕ್‌ ಮಾಡಲಾಗಿತ್ತು. ಇದನ್ನು ಗಮನಿಸದ ಕಾರು ಚಾಲಕ ಹಿಂಬದಿಯಿಂದ ಗುದ್ದಿದ್ದಾನೆ.

ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ವಿರಾಜ್ ರನ್ನು ಹೊರತೆಗೆಯಲು ಸ್ಥಳೀಯರು ಮತ್ತು ಟೋಲ್‌ ಸಿಬ್ಬಂದಿ ಸುಮಾರು ಒಂದು ಗಂಟೆಗಳ ಶ್ರಮಿಸಿದ್ದಾರೆ ಎಂದು ತಿಳಿದು ಬಂದಿದೆ.

 ಗಾಯಾಳುಗಳಿಬ್ಬರನ್ನೂ ಮಂಗಳೂರಿನ ಎಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಎಂಬುದಾಗಿ ಅವರ ಮಿತ್ರ ವಲಯ ತಿಳಿಸಿದೆ.

ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.