ಹೆಜಮಾಡಿ ಬಂದರು ಪೂರ್ಣಗೊಳಿಸಲು ಮೀನುಗಾರಿಕಾ ಮುಖ್ಯ ಕಾರ್ಯದರ್ಶಿಯವರಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ
(Hejamady) ಹೆಜಮಾಡಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಬಂದರಿಗೆ 2021-22 ಸಾಲಿನಲ್ಲಿ 180 ಕೋಟಿ ಮಂಜುರಾಗಿದ್ದು, ಬಂದರಿನ ಕಾಮಗಾರಿಯನ್ನು ಕೂಡಲೆ ಕೈಗೊಳ್ಳಬೇಕಾಗಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮೀನುಗಾರಿಕಾ ಮುಖ್ಯ ಕಾರ್ಯದರ್ಶಿಗಳಾದ ಅಜಯ್ ನಾಗಭೂಷಣ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಹೆಜಮಾಡಿ ಮೀನುಗಾರಿಕಾ ಬಂದರು ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಮತ್ತು ಸುತ್ತಮುತ್ತಲಿನ ಮೀನುಗಾರರಿಗೆ ತೊಂದರೆ ಆಗುತ್ತಿದೆ. ಮೀನುಗಾರಿಕಾ ದೋಣಿ ತಂಗುದಾಣಕ್ಕೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿ ಶೀಘ್ರವಾಗಿ ಹೆಜಮಾಡಿ ಬಂದರಿನ ಕಾಮಗಾರಿ ಪ್ರಾರಂಭಿಸುವಂತೆ ಮನವಿ ಮಾಡಿದರು.
ಮೀನುಗಾರಿಕಾ ಕಾರ್ಯದರ್ಶಿ ಅಜಯ್ ನಾಗಭೂಷಣ್‌ರವರು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಮನವಿಗೆ ಸ್ಪಂದಿಸಿ, ಕೂಡಲೇ ಕಾಮಗಾರಿಗೆಯನ್ನು ಕೈಗೆತ್ತಿಗೊಳ್ಳುವ ಬಗ್ಗೆ ಭರವಸೆ ನೀಡಿದರು.

