ಹೆಜಮಾಡಿ ಸ್ಕೂಟರ್ ಗೆ ಬಸ್ ಡಿಕ್ಕಿ : ಸ್ಕೂಟಿ ಸವಾರ ಸಾವು
(Padubidri) ಪಡುಬಿದ್ರಿ : ತಡೆ ರಹಿತ ಬಸ್ಸೊಂದು ಸ್ಕೂಟರ್ ಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಹೆಜಮಾಡಿ ಕಿರು ಟೋಲ್ ಗೇಟ್ ಬಳಿ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ.
ಮೃತ ವ್ಯಕ್ತಿ ಸ್ಕೂಟರ್ ಸವಾರ ಹೆಜಮಾಡಿ ಕೋಡಿ ನಿವಾಸಿ ತುಷರ್ (32) ಎಂದು ಗುರುತಿಸಲಾಗಿದೆ.
ತುಷಾರ್ ಮಂಗಳೂರಿನಲ್ಲಿ ಉದ್ಯೋಗಿಯಾಗಿದ್ದು, ಹೆಜಮಾಡಿ ಒಳ ರಸ್ತೆಯಿಂದ ನೇರವಾಗಿ ಸ್ಕೂಟಿಯಲ್ಲಿ ಹೆದ್ದಾರಿ ಪ್ರವೇಶಿಸುತ್ತಿದ್ದಂತೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಬಸ್ ಡಿಕ್ಕಿಯಾಗಿದೆ.
ಸ್ಕೂಟಿ ಬಸ್ಸಿನ ಅಡಿಭಾಗದಲ್ಲಿ ಸಿಲುಕಿಕೊಂಡಿದ್ದು, ಅದನ್ನು ಟೋಲ್ ಸಿಬ್ಬಂದಿ ಹಾಗೂ ಸ್ಥಳೀಯರು ಪ್ರಯಾಸದಿಂದ ಹೊರ ತೆಗೆದಿದ್ದಾರೆ.
ಬಸ್ ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದು, ಆತನನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಮೃತಪಟ್ಟಿದ್ದಾನೆ.
ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

