ಪ. ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಭಾಜಪಾ ಜಯಭೇರಿ: ಕಾಪುವಿನಲ್ಲಿ ವಿಜಯೋತ್ಸವ (BJP wins in West Bengal, Assam, Puducherry: Victory celebrations in Kapu)
ಪ. ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಭಾಜಪಾ ಜಯಭೇರಿ: ಕಾಪುವಿನಲ್ಲಿ ವಿಜಯೋತ್ಸವ
ಕಾಪು ಮಂಡಲ ಬಿಜೆಪಿ ಕಚೇರಿ ಬಳಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಣೆ
(Kaup) ಕಾಪು: ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಐತಿಹಾಸಿಕ ಗೆಲುವಿನ ಸಲುವಾಗಿ ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿ ಬಳಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಣೆ ನಡೆಸಲಾಯಿತು.
ವಿಜಯೋತ್ಸವದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿ, ಭಾರತೀಯ ಜನತಾ ಪಕ್ಷದ ಗೆಲುವಿಗೆ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಪಕ್ಷದ ವರಿಷ್ಠರು, ಮುಖಂಡಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಮತ್ತು ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಕಾಪು ಪುರಸಭೆಯ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಕಾಪು ಪುರಸಭೆಯ ಸದಸ್ಯರು, ವಿವಿಧ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

