• Home  
  • ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ನೀರಸ ಬಜೆಟ್ ಮಂಡನೆ: ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (A dull budget presentation by CM Siddaramayya : Kaup MLA Gurme Suresh Shetty)
- ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ನೀರಸ ಬಜೆಟ್ ಮಂಡನೆ: ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (A dull budget presentation by CM Siddaramayya : Kaup MLA Gurme Suresh Shetty)

Share: ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ನೀರಸ ಬಜೆಟ್ ಮಂಡನೆ: ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ  ಕಾಪು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayyah)ಅವರು ನೀರಸವಾದ ಬಜೆಟ್ ಮಂಡಿಸಿದ್ದಾರೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (Kaup MLA Gurme Suresh Shetty) ಪತ್ರಕರ್ತರೊಂದಿಗೆ ಹೇಳಿದ್ದಾರೆ.  ಜನರ ಆಶಾ ಭಾವನೆಗಳಿಗೆ ವಿರುದ್ಧವಾದ ಬಜೆಟ್ ಇದಾಗಿದೆ. ಸಂಪತ್ತಿನ ಸಮಾನ ಹಂಚಿಕೆ ಎನ್ನುವುದು ಸಿದ್ದರಾಮಯ್ಯ ಸರ್ಕಾರದಲ್ಲಿ ಮರೀಚಿಕೆಯಾಗಿದೆ. ಅಲ್ಪಸಂಖ್ಯಾತರನ್ನು ಓಲೈಸಲೆಂದೇ ಈ ಬಜೆಟ್  ತಯಾರಿಗೊಳಿಸಲಾಗಿದೆ. ನನ್ನ ತೆರಿಗೆ ನನ್ನ ಹಕ್ಕು ಎಂದು […]

ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ನೀರಸ ಬಜೆಟ್ ಮಂಡನೆ: ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ 

ಕಾಪು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayyah)ಅವರು ನೀರಸವಾದ ಬಜೆಟ್ ಮಂಡಿಸಿದ್ದಾರೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (Kaup MLA Gurme Suresh Shetty) ಪತ್ರಕರ್ತರೊಂದಿಗೆ ಹೇಳಿದ್ದಾರೆ.

 ಜನರ ಆಶಾ ಭಾವನೆಗಳಿಗೆ ವಿರುದ್ಧವಾದ ಬಜೆಟ್ ಇದಾಗಿದೆ. ಸಂಪತ್ತಿನ ಸಮಾನ ಹಂಚಿಕೆ ಎನ್ನುವುದು ಸಿದ್ದರಾಮಯ್ಯ ಸರ್ಕಾರದಲ್ಲಿ ಮರೀಚಿಕೆಯಾಗಿದೆ. ಅಲ್ಪಸಂಖ್ಯಾತರನ್ನು ಓಲೈಸಲೆಂದೇ ಈ ಬಜೆಟ್  ತಯಾರಿಗೊಳಿಸಲಾಗಿದೆ. ನನ್ನ ತೆರಿಗೆ ನನ್ನ ಹಕ್ಕು ಎಂದು ಕೇಂದ್ರ ಸರ್ಕಾರದೆದುರು ವಾದ ಮಂಡಿಸಿದ ಸಿದ್ದರಮಾಯ್ಯನವರು, ಇಂದು ಉಡುಪಿ ಜಿಲ್ಲೆಯ ತೆರಿಗೆಯ ಪಾಲನ್ನು ಸರಿಯಾದ ಕ್ರಮದಲ್ಲಿ ನಮ್ಮ ಜಿಲ್ಲೆಗೆ ಹಿಂತಿರುಗಿಸಿಲ್ಲ.  ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಗೆ ಯಾವುದೇ ರೀತಿಯ ಉತ್ತೇಜನ ನೀಡಿಲ್ಲ. ಲೋಕಸಭಾ ಚುನಾವಣೆ ಹತ್ತಿರದಲ್ಲಿರುವಾಗ ಮೋದಿ ಸರ್ಕಾರವನ್ನು ದೂಷಿಸಿ ಮಂಡಿಸಿದ ಬಜೆಟ್ ಇದಾಗಿದೆ.

 ಗ್ಯಾರಂಟಿ ಯೋಜನೆಗಳಿಂದ ಅನುಭವಿಸುತ್ತಿರುವ  ನಷ್ಟವನ್ನು ಸರಿದೂಗಿಸಲು ರಾಜ್ಯದ ಜನರ ಮೇಲೆ ಸಿದ್ದರಾಮಯ್ಯ ತೆರಿಗೆಯ ಬರೆ ಹಾಕಿದ್ದಾರೆ.

  ಜನಸಾಮಾನ್ಯರ ಬದುಕಿಗೆ ಯಾವುದೇ ರೀತಿಯಲ್ಲೂ ಸಹಕಾರಿಯಾಗಿಲ್ಲ ಎಂದೂ ಗುರ್ಮೆ ಸುರೇಶ್‌ ಶೆಟ್ಟಿ ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.