• Home  
  • ಪೆರ್ಣಂಕಿಲ: ಮಾ. 17ಎ 2ರವರೆಗೆ   ಶ್ರೀಮಹಾಲಿಂಗೇಶ್ವರ ಶ್ರೀಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆ (Mar. 17- 2 April 2nd: Pernankila Sri Mahalingeshwara Temple Brahma kalasha)
- ಕರಾವಳಿ

ಪೆರ್ಣಂಕಿಲ: ಮಾ. 17ಎ 2ರವರೆಗೆ   ಶ್ರೀಮಹಾಲಿಂಗೇಶ್ವರ ಶ್ರೀಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆ (Mar. 17- 2 April 2nd: Pernankila Sri Mahalingeshwara Temple Brahma kalasha)

Share: ಪೆರ್ಣಂಕಿಲ: ಮಾ. 17ಎ 2ರವರೆಗೆ   ಶ್ರೀಮಹಾಲಿಂಗೇಶ್ವರ ಶ್ರೀಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆ  (Udupi) ಉಡುಪಿ: ಹಿರಿಯಡ್ಕ ಸಮೀಪದ ಪೆರ್ಣಂಕಿಲ ಗ್ರಾಮದಲ್ಲಿ ಪೇಜಾವರ ಮಠದ ಆಡಳಿತಕ್ಕೊಳಪಟ್ಟಿರುವ, ಸುಮಾರು 1500 ವರ್ಷಗಳ ಐತಿಹ್ಯವಿರುವ ಶ್ರೀಮಹಾಲಿಂಗೇಶ್ವರ ಶ್ರೀಮಹಾಗಣಪತಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರ ಗೊಳ್ಳುತ್ತಿದ್ದು, ಮಾರ್ಚ್ 17ರಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭವಾಗಿ ಎಪ್ರಿಲ್ 2ರಂದು ಜಾತ್ರೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ ಎಂದು ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿದ್ವಾನ್ ಪೆರ್ಣಂಕಿಲ ಹರಿದಾಸ್ ಭಟ್ (Pernankila Haridasa Bhat) ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಶಾ ನಾಯಕ್ […]

ಪೆರ್ಣಂಕಿಲ: ಮಾ. 17ಎ 2ರವರೆಗೆ   ಶ್ರೀಮಹಾಲಿಂಗೇಶ್ವರ ಶ್ರೀಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆ

 (Udupi) ಉಡುಪಿ: ಹಿರಿಯಡ್ಕ ಸಮೀಪದ ಪೆರ್ಣಂಕಿಲ ಗ್ರಾಮದಲ್ಲಿ ಪೇಜಾವರ ಮಠದ ಆಡಳಿತಕ್ಕೊಳಪಟ್ಟಿರುವ, ಸುಮಾರು 1500 ವರ್ಷಗಳ ಐತಿಹ್ಯವಿರುವ ಶ್ರೀಮಹಾಲಿಂಗೇಶ್ವರ ಶ್ರೀಮಹಾಗಣಪತಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರ ಗೊಳ್ಳುತ್ತಿದ್ದು, ಮಾರ್ಚ್ 17ರಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭವಾಗಿ ಎಪ್ರಿಲ್ 2ರಂದು ಜಾತ್ರೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ ಎಂದು ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿದ್ವಾನ್ ಪೆರ್ಣಂಕಿಲ ಹರಿದಾಸ್ ಭಟ್ (Pernankila Haridasa Bhat) ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಶಾ ನಾಯಕ್ (Pernankila Shreesha Nayak) ಪೆರ್ಣಂಕಿಲ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

 ಪೇಜಾವರ ಮಠದ ದಿ. ಶ್ರೀವಿಶ್ವೇಶ ತೀರ್ಥ ಶ್ರೀಪಾದರ ಆಶಯದಂತೆ, ಅವರ ಶಿಷ್ಯ ಶ್ರೀವಿಶ್ವಪ್ರಸನ್ನ ತೀರ್ಥರು ಈ ಕ್ಷೇತ್ರದ ಜೀರ್ಣೋದ್ದಾರದ ಸಂಕಲ್ಪ ಮಾಡಿದ್ದಾರೆ. ಭಕ್ತರ ಸಹಕಾರದಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ದೇವಳಗಳ ಜೀರ್ಣೋದ್ದಾರ, 5 ಕೋಟಿ ರೂ. ವೆಚ್ಚದಲ್ಲಿ ಪೇಜಾವರ ಶಾಖಾ ಮಠದ ಪುನರ್ನಿರ್ಮಾಣ ಮತ್ತು 5 ಕೋಟಿ ರೂ. ವೆಚ್ಚದಲ್ಲಿ ಸಭಾಂಗಣ ಮತ್ತು ಭೋಜನಾಲಯ ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು, ಕೊನೆಯ ಹಂತದಲ್ಲಿವೆ ಎಂದು ಅವರು ತಿಳಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.