• Home  
  •   ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು (Udupi : Attempt to beseige Congress Office by BJP Workers, Stopped by Police)
- ರಾಜಕೀಯ

  ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು (Udupi : Attempt to beseige Congress Office by BJP Workers, Stopped by Police)

Share:   ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು (Udupi:) ಉಡುಪಿ : ನೂತನ ರಾಜ್ಯಸಭಾ ಸದಸ್ಯರಾಗಿ ನಾಸೀರ್ ಹುಸೇನ್ (Nasir Husain) ಗೆದ್ದ ಸಂಭ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧದಲ್ಲೇ ದೇಶ ವಿರೋಧಿ ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಖಂಡಿಸಿ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ […]

  ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು

(Udupi:) ಉಡುಪಿ : ನೂತನ ರಾಜ್ಯಸಭಾ ಸದಸ್ಯರಾಗಿ ನಾಸೀರ್ ಹುಸೇನ್ (Nasir Husain) ಗೆದ್ದ ಸಂಭ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧದಲ್ಲೇ ದೇಶ ವಿರೋಧಿ ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಖಂಡಿಸಿ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾ‌ರ್ ಕುಂದಾಪುರ (Udupi BJP President Kishore Kumar Kundapura) ಹಾಗೂ ಉಡುಪಿ ಶಾಸಕ ಯಶ್ವಾಲ್ ಸುವರ್ಣರವರ (Udupi MLA Yashpal Suvarna) ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯತ್ನಿಸಿದೆ.

 ಇದನ್ನು ತಡೆಯಲು ಪೊಲೀಸರು ಬ್ರಹ್ಮಗಿರಿ ಸರ್ಕಲ್ ನಲ್ಲಿ ವ್ಯಾಪಕ ಬಂದೋಬಸ್ತ್ ಮಾಡಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಕಚೇರಿ ಮುಂಭಾಗ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಕಚೇರಿ ಮುಂಭಾಗ ಜಮಾಯಿಸಿದ್ದಾರೆ.

  ಕಾಂಗ್ರೆಸ್ ಕಚೇರಿಯತ್ತ  ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಶ್ ವಶಕ್ಕೆ

  ಪಾಕಿಸ್ಥಾನ ಪರ ಘೋಷಣೆ ಆರೋಪ ಮುಂದಿಟ್ಟು ಇವತ್ತು ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಬ್ರಹ್ಮಗಿರಿ ಸರ್ಕಲ್ ಬಳಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಬಳಿಕ ಕಾಂಗ್ರೆಸ್ ಕಚೇರಿಯತ್ತ ಹೊರಟ ಕಾರ್ಯಕರ್ತರನ್ನು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪೊಲೀಸರು ತಡೆದರು.ಪ್ರತಿಭಟನೆಗೂ ಮುನ್ನವೇ ಪೊಲೀಸರು ಮುಂದೆ ಹೋಗದಂತೆ ಬ್ಯಾರಿಕೇಡ್ ಅಳವಡಿಸಿದ್ದರು. ಪ್ರತಿಭಟನಕಾರರನ್ನು  ಹಿಮ್ಮೆಟ್ಟಿಸಿದ ಪೊಲೀಸರು ಬಳಿಕ ವಶಕ್ಕೆ ಪಡೆದರು.

ಉಡುಪಿ ಶಾಸಕ ಯಶ ಪಾಲ್ ಸುವರ್ಣ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.

 ಬಿಜೆಪಿ ಪ್ರತಿಭಟನೆ, ತಡೆಯಲು ಸಿದ್ಧತೆ ನಡೆಸಿದ ಕಾಂಗ್ರೆಸ್

 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕುವುದನ್ನು ತಡೆಯಲು ಕಾಂಗ್ರೆಸ್ ಕಾರ್ಯಕರ್ತರು ಕೂಡ ಸಿದ್ಧತೆಗಳನ್ನು ಮಾಡಿಕೊಂಡಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ (Udupi Congress President Ramesh Kanchan) ನೇತೃತ್ವದಲ್ಲಿ ಸಾಕಷ್ಟು ಮಂದಿ ಯುವ ಕಾರ್ಯಕರ್ತರು ಮುಂಜಾನೆಯೇ ಕಾಂಗ್ರೆಸ್ ಕಚೇರಿಗೆ ಆಗಮಿಸಿದ್ದರು. ನಂತರ ಕಚೇರಿಯ ಮುಂಭಾಗದಲ್ಲಿ ಕೋಟೆಯಾಕಾರದಲ್ಲಿ ಕುರ್ಚಿಗಳನ್ನು ಹಾಕಿ ಕುಳಿತುಕೊಂಡು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು.

 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಬಳಿ ಬಂದರೆ ಸಂಘರ್ಷವಾಗುವ ವಾತಾವರಣ ಕೂಡ ಸೃಷ್ಟಿಯಾಗಿತ್ತು. ಆದರೆ ಪೊಲೀಸರು ಅನತಿ ದೂರದಲ್ಲಿಯೇ ಬಿಜೆಪಿ ಕಾರ್ಯಕರ್ತರನ್ನು ತಡೆದು ಬಂಧಿಸಿ ಕರೆದೊಯ್ದರು.

 ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ(EX Minister Vinay Kumar Sorake), ಕಾಂಗ್ರೆಸ್ ಕಚೇರಿ ನಮಗೆ ದೇವಸ್ಥಾನ, ಪ್ರಾರ್ಥನಾ ಮಂದಿರ ಇದ್ದಂತೆ. ಅದಕ್ಕೆ ಬಿಜೆಪಿ ಕಾರ್ಯಕರ್ತರು ಬಂದು ನುಗ್ಗುತ್ತಾರೆ ಎಂದರೆ ನಾವೇನೂ ಕೈಕಟ್ಟಿ ಕೂರುತ್ತೇವೆಯೇ? ನಾವು ಕೂಡ ದೇಶದ ಸ್ವಾತಂತ್ರ್ಯ ಹೋರಾಟ ನಡೆಸಿದ ಪೀಳಿಗೆಯವರು ಎಂದು ಹೇಳಿದರು.

 ನಮಗೆ ಮೊದಲೇ ಗೊತ್ತಿತ್ತು, ಬಿಜೆಪಿ ಕಾರ್ಯಕರ್ತರು ಬರ್ತಾರೆ, ಪ್ರತಿಭಟನೆಯ ನಾಟಕ ಮಾಡ್ತಾರೆ, ನಾವೇನೂ ಮಾಡುವುದಿಲ್ಲ ಹಿಂದಕ್ಕೆ ಹೋಗುತ್ತೇವೆ ಎಂದು ಪೊಲೀಸರಿಗೆ ಮೊದಲೇ ಹೇಳಿರ್ತಾರೆ, ಹಾಗೇ ಮಾಡಿದ್ದಾರೆ ಎಂದವರು ಲೇವಡಿ ಮಾಡಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.