ಉದಯವಾಣಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ
(Mangaluru) ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ (62) ಅವರು ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.
ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್, ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ʼನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ʼಉದಯವಾಣಿʼ ಪತ್ರಿಕೆಯ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು. ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಮುದ್ರಣ ಮಾಧ್ಯಮಕ್ಕೆ ನೀಡಿರುವ ಅಪಾರ ಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಮನೋಹರ ಪ್ರಸಾದ್ ಪಡೆದಿದ್ದಾರೆ.
ಗಣ್ಯರ ಸಂತಾಪ – ಮನೋಹರ ಪ್ರಸಾದ್ ನಿಧನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು(MP Nalinkumar Kateel), ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ(Kaup MLA Gurme Suresf Shetty), ಮಾಜಿ ಸಚಿವ ವಿನಯಕುಮಾರ್ ಸೊರಕೆ (EX Minister Vinaykumar Sorake)ಸಹಿತ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

