ಬೆಳಪು ಸ್ಪೋರ್ಟ್ಸ್ ಕ್ಲಬ್ ಇದರ 30ನೆಯ ವಾರ್ಷಿಕೋತ್ಸವದ ಸಂಭ್ರಮ

(belapu) ಬೆಳಪು: ಬೆಳಪು ಸ್ಪೋರ್ಟ್ಸ್ ಕ್ಲಬ್ ಇದರ 30ನೆಯ ವಾರ್ಷಿಕೋತ್ಸವದ ಸಂಭ್ರಮದಿಂದ ನೆರವೇರಿತು.
ವಾರ್ಷಿಕೋತ್ಸವದ ಅಂಗವಾಗಿ 20204ನೇ ಸಾಲಿನ ಸಾಮಾಜಿಕ ಕಾರ್ಯ ಚಟುವಟಿಕೆಯ ಬಾಗವಾಗಿ ಬೆಳಪು ಗ್ರಾಮದ ಎರಡನೇ ಅಂಗನವಾಡಿ ಕೇಂದ್ರಕ್ಕೆ ಕುಡಿಯುವ ಪರಿಶುದ್ಧ ನೀರಿನ ಘಟಕವನ್ನು ಮತ್ತು ಕಪಾಟು ಹಸ್ತಾಂತರಿಸಲಾಯಿತು.
ಬೆಳಪು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿಯವರು (DR Deveiprsad Shetty)ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ, ಬೆಳಪು ಸ್ಪೋರ್ಟ್ಸ್ ಕ್ಲಬ್ ನಿರಂತರವಾಗಿ ಸಾಮಾಜಿಕ, ಶಿಕ್ಷಣ, ಕ್ರೀಡೆಗಳಿಗೆ ಮಹತ್ವವನ್ನು ನೀಡುತ್ತಾ ಬಂದಿದೆ. ಮುಂದೆಯೂ ಸೇವೆ ನಿರಂತರವಾಗಿರಲಿ ಎಂದು ಹಾರೈಸಿದರು.
ಬೆಳಪು ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ಶಾನಾವಾಝ್ ಫಝಲುದ್ದೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಶಾಹೀದ್ ನವಾಜ್, ಕಾರ್ಯದರ್ಶಿ ರಿಯಾನ್ ಅನ್ಸಾರ್, ಜೊತೆ ಕಾರ್ಯದರ್ಶಿ ಸಕ್ಲೆನ್ ಅಹಮ್ಮದ್, ಬೆಳಪು ಸ್ಪೋರ್ಟ್ಸ್ ಕ್ಲಬ್ ನ ಹಿರಿಯ ಸದಸ್ಯರುಗಳಾದ ಅಲ್ತಾಫ್ ಅಬ್ದುಲ್ ಘನಿ, ಸಹೀದ್, ಅಕ್ರಮ್ ಮಹತಾಬ್, ಅಂಜಿಲ್ ಭಟ್ ಹಾಗೂ ಖಾಲಿದ್ ಅಹ್ಮದ್ ಉಪಸ್ಥಿತರಿದ್ದರು.
ಅಂಗನವಾಡಿಯ ಶಿಕ್ಷಕಿಯರಾದ ಶ್ರೀಮತಿ ಪ್ರಿಯ ಶ್ರೀಮತಿ ಆಶಾಲತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

