• Home  
  •  ಪಲಿಮಾರು – ನಂದಿಕೂರು ಶಕ್ತಿ ಕೇಂದ್ರದ ಸಭೆ – ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ (Palimaru – Nandikuru Shakhti kendra meeting: Kaup MLA participated)
- ರಾಜಕೀಯ

 ಪಲಿಮಾರು – ನಂದಿಕೂರು ಶಕ್ತಿ ಕೇಂದ್ರದ ಸಭೆ – ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ (Palimaru – Nandikuru Shakhti kendra meeting: Kaup MLA participated)

Share: ಪಲಿಮಾರು – ನಂದಿಕೂರು ಶಕ್ತಿ ಕೇಂದ್ರದ ಸಭೆ – ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ (Palimaru) ಪಲಿಮಾರು: ಪಲಿಮಾರು – ನಂದಿಕೂರು ಶಕ್ತಿ ಕೇಂದ್ರದ ಸಭೆ ಗುರುವಾರ ಸಂಜೆ ಪಲಿಮಾರಿನಲ್ಲಿ ನಡೆಯಿತು. ಸಭೆಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿದರು.  ಸಭೆಯಲ್ಲಿ ಶಾಸಕರು ಮಾತನಾಡಿ, ನರೇಂದ್ರ ಮೋದಿ ಅವರು ಭಾರತದ ಪ್ರಧಾನ ಮಂತ್ರಿಯಾಗಿರುವುದರಿಂದ ಭಾರತ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆ ರಾಷ್ಟ್ರವಾಗಿದೆ. ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ ಭಾರತ ವಿಶ್ವದ […]

ಪಲಿಮಾರು – ನಂದಿಕೂರು ಶಕ್ತಿ ಕೇಂದ್ರದ ಸಭೆ – ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

(Palimaru) ಪಲಿಮಾರು: ಪಲಿಮಾರು – ನಂದಿಕೂರು ಶಕ್ತಿ ಕೇಂದ್ರದ ಸಭೆ ಗುರುವಾರ ಸಂಜೆ ಪಲಿಮಾರಿನಲ್ಲಿ ನಡೆಯಿತು. ಸಭೆಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿದರು.

 ಸಭೆಯಲ್ಲಿ ಶಾಸಕರು ಮಾತನಾಡಿ, ನರೇಂದ್ರ ಮೋದಿ ಅವರು ಭಾರತದ ಪ್ರಧಾನ ಮಂತ್ರಿಯಾಗಿರುವುದರಿಂದ ಭಾರತ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆ ರಾಷ್ಟ್ರವಾಗಿದೆ. ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ ಭಾರತ ವಿಶ್ವದ 3ನೇ ಆರ್ಥಿಕತೆಯ ರಾಷ್ಟ್ರವಾಗುದರಲ್ಲಿ ಸಂಶಯವಿಲ್ಲ ಎಂದು ಹೇಳಿದ ಅವರು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ಶ್ರಮಿಸೋಣ ಎಂದರು.

 ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕಾರ್ಯದರ್ಶಿ ಪ್ರವೀಣ್ ಪೂಜಾರಿ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ ಪೈ, ಪಲಿಮಾರು ಶಕ್ತಿ ಕೇಂದ್ರದ  ಸಂಚಾಲಕಿ ಗಾಯತ್ರಿ ಪ್ರಭು, ಸಹ ಸಂಚಾಲಕ ವಾಸುದೇವ ಪಲಿಮಾರು, ನಂದಿಕೂರು ಶಕ್ತಿ ಕೇಂದ್ರದ ಸಹ ಸಂಚಾಲಕ ಪ್ರಸಾದ್ ಪಲಿಮಾರು, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.