• Home  
  • ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಹೊರೆಕಾಣಿಕೆ (Uchila Sri Mahalaxmi Temple Horekanike)
- ಧಾರ್ಮಿಕ - ವಿಡಿಯೋ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಹೊರೆಕಾಣಿಕೆ (Uchila Sri Mahalaxmi Temple Horekanike)

Share: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಹೊರೆಕಾಣಿಕೆ ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಶನಿವಾರ ಸಂಜೆ ಹೊರೆಕಾಣಿಕೆ ನೆರವೇರಿತು.  ದೇವಳದ ರಥೋತ್ಸವ ಕಾರ್ಯಕ್ರಮ ಇಂದಿನಿಂದ ಮುಂದಿನ ಶುಕ್ರವಾರದವರೆಗೆ ನೆರವೇರಲಿದೆ.  ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಮೊಗವೀರ ಮುಂದಾಳು ಡಾ. ಜಿ ಶಂಕರ್ (Nadoja DR G Shankar)ಅವರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.  ಈ […]

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಹೊರೆಕಾಣಿಕೆ

ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಶನಿವಾರ ಸಂಜೆ ಹೊರೆಕಾಣಿಕೆ ನೆರವೇರಿತು.

 ದೇವಳದ ರಥೋತ್ಸವ ಕಾರ್ಯಕ್ರಮ ಇಂದಿನಿಂದ ಮುಂದಿನ ಶುಕ್ರವಾರದವರೆಗೆ ನೆರವೇರಲಿದೆ.

 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಮೊಗವೀರ ಮುಂದಾಳು ಡಾ. ಜಿ ಶಂಕರ್ (Nadoja DR G Shankar)ಅವರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.

 ಈ ಸಂದರ್ಭ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ(Jaya C Kotian), ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ ಅಮೀನ್(Gundu B Amin), ಕ್ಷೇರ್ತಾಡಳಿತ ಮಂಡಳಿ ಅಧ್ಯಕ್ಷ ವಾಸುದೇವ ಸಾಲಿಯಾನ್‌ (Vasudeva Salian), ಉಪಾಧ್ಯಕ್ಷ ಸುಭಾಷ್ ಚಂದ್ರ ಕಾಂಚನ್, ಕಾರ್ಯದರ್ಶಿ ಸುಧಾಕರ್ ಕುಂದರ್, ಆನಂದ ಸಿ ಕುಂದರ್‌, ಮೊಗವೀರ ಮಹಾಜನ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಉಷಾರಾಣಿ ಬೋಳೂರು, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಸಭಾದ ಅಧ್ಯಕ್ಷೆ ಶ್ರೀಮತಿ ಅಧ್ಯಕ್ಷ ಸುಗುಣ ಸುಕುಮಾರ್, ದೇವಸ್ಥಾನದ ಪ್ರಧಾನ ಮೆನೇಜರ್ ಸತೀಶ್ ಅಮೀನ್ ಸಹಿತ ಸಮಿತಿಯ ಸದಸ್ಯರು, ಮೊಗವೀರ ಮಹಾಜನ ಸಂಘದ ಸದಸ್ಯರು, ಸಹಿತ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.