• Home  
  • ಕಾಪುವಿನಲ್ಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ (Amassive convention of Vidhan Sabha Constituency BJP workers in Kapu)
- ರಾಜಕೀಯ

ಕಾಪುವಿನಲ್ಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ (Amassive convention of Vidhan Sabha Constituency BJP workers in Kapu)

Share: ಕಾಪುವಿನಲ್ಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಕಾಪು : ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ, ಕಾಪು ಮಂಡಲ ಬಿಜೆಪಿ ನೂತನ ಅಧ್ಯಕ್ಷ ಜಿತೇಂದ್ರ ಶೆಟ್ಟಿ (Jitendra Shetty) ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭÀವು ಕಾಪುವಿನ ಹೋಟೆಲ್ ಕೆ೧ ಸಭಾಂಗಣದಲ್ಲಿ ಶನಿವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ(MLA Gurme Suresh Shetty) , ಬಡತನ, ಹಸಿವು ಅರಿತಿರುವ ಜನ ಸಮಾನ್ಯರಿಗೆ ಕೈಗೆಟಕುವ […]

ಕಾಪುವಿನಲ್ಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ

ಕಾಪು : ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ, ಕಾಪು ಮಂಡಲ ಬಿಜೆಪಿ ನೂತನ ಅಧ್ಯಕ್ಷ ಜಿತೇಂದ್ರ ಶೆಟ್ಟಿ (Jitendra Shetty) ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭÀವು ಕಾಪುವಿನ ಹೋಟೆಲ್ ಕೆ೧ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಈ ಸಂದರ್ಭ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ(MLA Gurme Suresh Shetty) , ಬಡತನ, ಹಸಿವು ಅರಿತಿರುವ ಜನ ಸಮಾನ್ಯರಿಗೆ ಕೈಗೆಟಕುವ ನಾಯಕ (BJP Candidate Kota Shrinivasa Poojary) ಕೋಟ ಶ್ರೀನಿವಾಸ ಪೂಜಾರಿ (BJP Candidate Kota Shrinivasa Poojary) ಅವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದ ಕೂಡಲೇ ಅರ್ಧ ಯುದ್ಧವನ್ನು ಗೆದ್ದಂತೆ ಆಗಿದೆ. ಜಾತಿ ಧರ್ಮ ಮತ ಪಂಥವನ್ನು ಮೀರಿ ಕಾಪು ಕ್ಷೇತ್ರದಲ್ಲಿ ಕನಿಷ್ಠ ೫೦ ಸಾವಿರ ಮತಗಳ ದಾಖಲೆಯ ಅಂತರದಲ್ಲಿ ಅವರನ್ನು ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ (PM Narendra Modi) ನೇತೃತ್ವದ ಸರಕಾರದ ಅಭೂತ ಪೂರ್ವ  ಸಾಧನೆಗಳು ನಮ್ಮ ಗೆಲುವಿಗೆ ವರದಾನವಾಗಲಿದ್ದು, ಕೇಂದ್ರ ಸರಕಾರದ ಅನುದಾನ ಮತ್ತು ರಾಜ್ಯದ ಸಮನ್ವಯದೊಂದಿಗೆ ಕ್ಷೇತ್ರದಾದ್ಯಂತ ಅಭಿವೃದ್ಧಿಗೆ ಮುಂದಡಿ ಇರಿಸಲಾಗುತ್ತದೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುವಂತೆ ಕರೆ ನೀಡಿದರು.

ಶಾಸಕರಾದ ಯಶ್‌ಪಾಲ್ ಸುವರ್ಣ (MLA Yashpal Suvarna), ಮಾಜಿ ಸಚಿವ ಪ್ರಮೋದ್ ಮಧ್ವರಾಜ್ (EX Minister Pramod Madhvaraj), ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ (EX Mla Lalaji Mendon), ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್‌ಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವಂತೆ ಕರೆ ನೀಡಿದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಮತ್ತು ಪದಾಧಿಕಾರಿಗಳಿಗೆ ಪಕ್ಷದ ಶಾಲು ತೊಡಿಸಿ ಪದಗ್ರಹಣವನ್ನು ನಡೆಸಲಾಯಿತು.

ವೇದಿಕೆಯಲ್ಲಿ ಬಿಜೆಪಿ ಮಂಗಳೂರು ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್‌ಸಿ ಮೋರ್ಚಾದ ದಿನಕರ ಬಾಬು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ವಕ್ತಾರೆ ಗೀತಾಂಜಲಿ ಎಂ. ಸುವರ್ಣ, ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ರೇಶ್ಮಾ ಶೆಟ್ಟಿ, ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಚಿಕ್ಕಮಗಳೂರು ಲೋಕಸ`Á ಕ್ಷೇತ್ರದ ಚುನಾವಣಾ ಸಹ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಪ್ರಮುಖರಾದ ನೀತಾ ಗುರುರಾಜ್, ಸೋನು ಪಾಂಗಾಳ, ಪ್ರಥ್ವಿರಾಜ್ ಬಿಲ್ಲಾಡಿ, ಸುಮಾ ಯು. ಶೆಟ್ಟಿ, ಶ್ಯಾಮಲಾ ಕುಂದರ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು, ಜೆಡಿಎಸ್ ನ ಕೆ. ವಾಸುದೇವ ರಾವ್, ವಿವಿಧ ಮೋರ್ಚಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸ್ತರದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಾಣೇಶ್ ಹೆಜಮಾಡಿ ವಂದೇ ಮಾತರಂ ಹಾಡಿದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ವಂದಿಸಿದರು.

ಶರಣ್ ಕುಮಾರ್ ಹೆಜಮಾಡಿ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.