• Home  
  • ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ (Congress candidate for Dakshina Kannada Lok Sabha constituency Padmaraj R. Submission of nomination papers)
- ರಾಜಕೀಯ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ (Congress candidate for Dakshina Kannada Lok Sabha constituency Padmaraj R. Submission of nomination papers)

Share: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ (Mangaluru) ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. (Padmaraj R)ಅವರು ಕುದ್ರೋಳಿ ಗೋಕರ್ಣ ನಾಥ ಕ್ಷೇತ್ರದಿಂದ ಭಾರಿ ಮೆರವಣಿಗೆಯಲ್ಲಿ ಸಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಖ್ಯ ಚುನಾವಣಾಧಿಕಾರಿ ಮುಲೈ ಮುಗಿಲನ್‌ ರವರಿಗೆ (DK DC Mulai Mugilan) ಬುಧವಾರ ನಾಮಪತ್ರ ಸಲ್ಲಿಸಿದರು.  ಪದ್ಮರಾಜ್ ಅವರು ಕುದ್ರೋಳಿ ಕ್ಣೇತ್ರದಲ್ಲಿ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ (B […]

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ

(Mangaluru) ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. (Padmaraj R)ಅವರು ಕುದ್ರೋಳಿ ಗೋಕರ್ಣ ನಾಥ ಕ್ಷೇತ್ರದಿಂದ ಭಾರಿ ಮೆರವಣಿಗೆಯಲ್ಲಿ ಸಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಖ್ಯ ಚುನಾವಣಾಧಿಕಾರಿ ಮುಲೈ ಮುಗಿಲನ್‌ ರವರಿಗೆ (DK DC Mulai Mugilan) ಬುಧವಾರ ನಾಮಪತ್ರ ಸಲ್ಲಿಸಿದರು.

 ಪದ್ಮರಾಜ್ ಅವರು ಕುದ್ರೋಳಿ ಕ್ಣೇತ್ರದಲ್ಲಿ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ (B Janardhana Poojary) ಅವರ ಜೊತೆ ಗೋಕರ್ಣನಾಥ ದೇವರು, ಪರಿವಾರ ದೇವರಿಗೆ ಹಾಗೂ ನಾರಾಯಣ ಗುರುಗಳ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಮುನ್ನ ಹಮ್ಮಿಕೊಂಡ ಮೆರವಣಿಗೆಗೆ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಗಾರುಡಿ ಗೊಂಬೆ ಬಳಗ, ಚೆಂಡೆವಾದನ, ಕೊಂಬು ಕಹಳೆಗಳು ಮೆರವಣಿಗೆ ಗೆ ನೆರುಗು ನೀಡಿದವು. ಕಾಂಗ್ರೆಸ್ ಧ್ವಜ ಹಿಡಿದು ಜಯಘೋಷ ಕೂಗುತ್ತಾ ಕಾರ್ಯಕರ್ತರು ಮೆರವಣಿಗೆಯುದ್ದಕ್ಕೂ ಹೆಜ್ಜೆ ಹಾಕಿದರು.ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜಗಳ ಜೊತೆ ತುಳುನಾಡ ಧ್ವಜವೂ ರಾರಾಜಿಸುತ್ತಿತ್ತು. ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundoo rao), ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಢಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್(Harish Kumar), ಜಿಲ್ಲಾ ಚುನಾವಣಾ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ(EX Minister B Ramanatha rai),ಮಾಜಿ ಶಾಸಕ ಜೇ ಆರ್‌ ಲೋಬೋ (EX mla J R Lobo, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ (Ivan Dsouza), ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಇನಾಯತ್ ಅಲಿ (Inayath Ali) ಮೊದಲಾದವರು ಭಾಗವಹಿಸಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.