• Home  
  •   2025 ರ ಮಾಚ್೯ 2ರಂದು ಕಾಪು ಶ್ರೀ ಹೊಸಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ (Kaup Sri Hosamarigudi Prathishta Brahmakalashothsava on 2nd Mar 2025)
- ಧಾರ್ಮಿಕ

  2025 ರ ಮಾಚ್೯ 2ರಂದು ಕಾಪು ಶ್ರೀ ಹೊಸಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ (Kaup Sri Hosamarigudi Prathishta Brahmakalashothsava on 2nd Mar 2025)

Share: 2025 ರ ಮಾಚ್೯ 2ರಂದು ಕಾಪು ಶ್ರೀ ಹೊಸಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ ಕಾಪು : ಇತಿಹಾಸ ಪ್ರಸಿದ್ಧ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ 2025 ರ ಮಾಚ್೯ 2ರಂದು ನೂತನ ದೇಗುಲದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಗೊಳಿಸಲಾಯಿತು. ದೇವಳದ ತಂತ್ರಿವರ್ಯರಾದ ಶ್ರೀ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರು ಭೂಕರ್ಷಣ ಖನನ, ಹರಣ, ದಾಹ, […]

2025 ರ ಮಾಚ್೯ 2ರಂದು ಕಾಪು ಶ್ರೀ ಹೊಸಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ

ಕಾಪು : ಇತಿಹಾಸ ಪ್ರಸಿದ್ಧ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ 2025 ರ ಮಾಚ್೯ 2ರಂದು ನೂತನ ದೇಗುಲದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಗೊಳಿಸಲಾಯಿತು.

ದೇವಳದ ತಂತ್ರಿವರ್ಯರಾದ ಶ್ರೀ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರು ಭೂಕರ್ಷಣ ಖನನ, ಹರಣ, ದಾಹ, ಪೂರಣ, ಬೀಜ ವಪನಗಳ ಜೊತೆಗೆ ಪ್ರತಿಷ್ಠಾ ದಿನವನ್ನು ನಿಗದಿಗೊಳಿಸಿದರು. ಈ ಸಂದರ್ಭ ಶಂಖನಾದ ಮೊಳಗಿಸಲಾಯಿತು.

 ಬೆಳಿಗ್ಗೆ ಕಾಪುವಿನ ಒಡೆಯ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ, ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯಲ್ಲಿ ಪ್ರಾರ್ಥಿಸಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲಾಯಿತು.

  ಪ್ರಾಚೀನ ಶೈಲಿಯ ಧಾರ್ಮಿಕ ವಿಧಿಗಳು :

ಮಾರಿಯಮ್ಮ ಮತ್ತು  ಉಚ್ಚಂಗಿ ದೇವಿಯ ನೂತನ ಆಲಯದಲ್ಲಿ ಪ್ರತಿಷ್ಠಾ ಪೂರ್ವಭಾವಿಯಾಗಿ ನಡೆಯುವ ಧಾರ್ಮಿಕ ವಿಧಿ ವಿಧಾನಗಳನ್ನು ಪ್ರಾಚೀನ ಶೈಲಿಯಲ್ಲಿ ಮಾಡಲಾಯಿತು.

  ಅಮ್ಮನ ಭವ್ಯ ಗರ್ಭಗುಡಿಯ ದಿವ್ಯ ಸಾನಿಧ್ಯದಲ್ಲಿ ಕೋಣಗಳಿಂದ ಉಳುಮೆ ಮಾಡುವ ಮೂಲಕ ನವ ಧಾನ್ಯಗಳ ಬಿತ್ತನೆ ಮಾಡಲಾಯಿತು.  ಮುಂದಿನ 18 ದಿನಗಳಲ್ಲಿ ಧಾನ್ಯಗಳು ಮೊಳಕೆಯೊಡೆದಾಗ ಗೋ ನಿವಾಸಕ್ಕಾಗಿ ಗರ್ಭಗುಡಿಯಲ್ಲಿ 9 ಅಥವಾ 18 ಗೋವುಗಳನ್ನು ಪೂಜಿಸಿ  ಅವುಗಳಿಗೆ ಧಾನ್ಯಗಳನ್ನು ಮೇಯಲು ಬಿಡಲಾಗುವುದು. ಗೋವುಗಳು ಸಾನಿಧ್ಯದಲ್ಲಿ 9  ದಿನ ಗೋವಾಸವಿದ್ದು,  9ನೇ ದಿನ ಗೋವುಗಳಿಂದ ಹಾಲನ್ನು ಕರೆದು ಪಂಚಗವ್ಯ ತಯಾರಿಸಿ ಅವುಗಳಿಂದ ದೇವಳದ ಆವರಣವನ್ನು ಸಂಪ್ರೋಕ್ಷಣೆ ಮಾಡಿ ಶುದ್ದಿಗೊಳಿಸಲಾಗುವುದು.

 ಗಣ್ಯರು, ದಾನಿಗಳು, ಭಕ್ತರ ಸಮ್ಮುಖದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರ, ಭೋಜನ ಶಾಲೆ ಹಾಗೂ ಸುಸಜ್ಜಿತ ಶೌಚಾಲಯಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಶಂಕು ಸ್ಥಾಪನೆ ನೆರವೇರಿಸಿದರು.  

 ಬಳಿಕ‌ ನಡೆದ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯನ್ನು ಗಣ್ಯರ ಸಮ್ಮುಖದಲ್ಲಿ ಘೋಷಿಸಲಾಯಿತು. 

 ಎಂ ಆರ್ ಜಿ ಗ್ರೂಪ್ ಬೆಂಗಳೂರು ಇದರ ಆಡಳಿತ ನಿರ್ದೇಶಕ ಬಂಜಾರಾ ಪ್ರಕಾಶ್ ಶೆಟ್ಟಿ ಮಾತನಾಡಿ, ಕಾಪು ಮಾರಿಯಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ಸಿಕ್ಕಿರುವುದು ಸೌಭಾಗ್ಯ. ವಿವಿಧ ಧಾರ್ಮಿಕ ಕಾರ್ಯಗಳಲ್ಲಿ ಭಾಗಿ ಆಗಿದ್ದೇನೆ.  ಮುಂದೆಯೂ  ಕ್ಷೇತ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕರಿಸುತ್ತೇನೆ ಎಂದರು.

ಇದೇ ಸಂದರ್ಭ ಖ್ಯಾತ ಯಕ್ಷಗಾನ ಭಾಗವತ ಪತ್ಲ ಸತೀಶ್‌ ಶೆಟ್ಟಿ ಹಾಡಿದ ಕ್ಷೇತ್ರದ ಬಗೆಗಿನ ಆಲ್ಬಂ ಗೀತೆಯನ್ನು ಲೋಕಾರ್ಪಣೆ ಗೊಳಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ವಹಿಸಿದ್ದರು.

 ಈ ಸಂದರ್ಭ ವಾಸ್ತು ತಜ್ಞ ವಿದ್ವಾನ್ ಸುಬ್ರಹ್ಮಣ್ಯ ಭಟ್ ಗುಂಡಿಬೈಲುರವರು ಕ್ಷೇತ್ರದ ಬಗೆಗಿನ ಮಾಹಿತಿ ನೀಡಿದರು.  

 ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ(Kaup MLA Gurme suresh Shetty), ಮಾಜಿ ಶಾಸಕ ಲಾಲಾಜಿ ಆರ್‌, ಮೆಂಡನ್‌(EX MLA Lalaji R Mendon), ಉದ್ಯಮಿಗಳಾದ ಆನಂದ್ ಎಂ ಶೆಟ್ಟಿ, ರವಿ ಸುಂದರ ಶೆಟ್ಟಿ, ರಂಜನಿ ಸುಧಾಕರ್ ಹೆಗ್ಡೆ, ಸುಜಾತ್ ಶೆಟ್ಟಿ, ಮೊಗವೀರ ಮಹಾಸಭಾದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ದೇವಳದ ಪ್ರಧಾನ ಅರ್ಚಕ ವೇ. ಮೂ. ಕೆ. ಶ್ರೀನಿವಾಸ ತಂತ್ರಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ್ ಶೆಟ್ಟಿ, ಮುಂಬೈ ಉಚ್ಛ ನ್ಯಾಯಾಲಯದ ನ್ಯಾಯವಾದಿ ಮಹೇಶ್ ಕೋಟ್ಯಾನ್, ಅಭಿವೃದ್ಧಿ ಸಮಿತಿಯ ಆಫ್ರಿಕಾ ಘಟಕದ ಅಧ್ಯಕ್ಷ ಮಹೇಶ್ ಕುಮಾರ್, ಯೋಗೀಶ್‌ ಶೆಟ್ಟಿ ಬಾಲಾಜಿ, ರಮೇಶ್ ಹೆಗ್ಡೆ ಕಲ್ಯ, ಕಾಪು ದಿವಾಕರ್ ಶೆಟ್ಟಿ, ಮಾಧವ ಪಾಲನ್, ದೇವಿ ಪ್ರಸಾದ್ ಶೆಟ್ಟಿ, ಮನೋಹರ್ ಶೆಟ್ಟಿ ಸಾಯಿರಾಧಾ, ಶಿಲ್ಪಾ ಜಿ, ಸುವರ್ಣ, ಗೀತಾಂಜಲಿ ಸುವರ್ಣ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಮತ್ತಿತರರು ಉಪಸ್ಥಿತರಿದ್ದರು.

ರೇಣುಕಾ ಜೋಗಿ ಪ್ರಾರ್ಥಿಸಿದರು. ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿದರು.

 ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು. ಸಮಿತಿ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.