ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

(Yallapura) ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಮುಂಡುಗೊಡು ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಘಟನೆ ನಡೆದಿದೆ.
ಬಿಜೆಪಿ ಪಕ್ಷದ ಶಾಸಕರಾದ ಮಾನ್ಯ ಹೆಬ್ಬಾರ್ ರವರ ಪುತ್ರ ವಿವೇಕ್ ಹೆಬ್ಬಾರ್ ರವರು ತಮ್ಮ ಬಿಜೆಪಿಯ ನೂರಾರು ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡಿದ್ದು, ಅವರನ್ನು ಮಾಜಿ ಶಾಸಕರಾದ ಐವನ್ ಡಿಸೋಜರವರು ಪಕ್ಷದ ಬಾವುಟ ಮತ್ತು ಹೂವನ್ನು ನೀಡಿ ಪಕ್ಷಕ್ಕೆ ಸ್ವಾಗತಿಸಿ, ಶುಭ ಹಾರೈಸಿದರು.
ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ. ಕೆ ಶಿವಕುಮಾರ್ (DCM DK Shivkumar) ರವರ ಆದೇಶದ ಮೇರೆಗೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಯಾಗಿ ಕೆ ಪಿ ಸಿ ಸಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕರಾದ ಐವನ್ (EX MLC Ivan Desouza) ಡಿಸೋಜ ರವರು ಇಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಮುಂಡುಗೋಡಿನಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡಿದ್ದರು.
ಈ ಸಂದರ್ಭ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

