• Home  
  • ಉಡುಪಿ: ಕಾಂಗ್ರೆಸ್ ಕಾರ್ಯಕರ್ತರಿಂದ ‘ಚೊಂಬು’ ಪ್ರತಿಭಟನೆ- ಕೇಂದ್ರದ ವಿರುದ್ಧ ಆಕ್ರೋಶ (Udupi “Chombu” Protest by Congress workers Outrage against Central Govt)
- ರಾಜಕೀಯ

ಉಡುಪಿ: ಕಾಂಗ್ರೆಸ್ ಕಾರ್ಯಕರ್ತರಿಂದ ‘ಚೊಂಬು’ ಪ್ರತಿಭಟನೆ- ಕೇಂದ್ರದ ವಿರುದ್ಧ ಆಕ್ರೋಶ (Udupi “Chombu” Protest by Congress workers Outrage against Central Govt)

Share: ಉಡುಪಿ: ಕಾಂಗ್ರೆಸ್ ಕಾರ್ಯಕರ್ತರಿಂದ ‘ಚೊಂಬು‘ ಪ್ರತಿಭಟನೆ– ಕೇಂದ್ರದ ವಿರುದ್ಧ ಆಕ್ರೋಶ  (Udupi) ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ದ ಚೊಂಬು ಹಿಡಿದುಕೊಂಡು ಪ್ರತಿಭಟನೆ  ಕೈಗೊಳ್ಳಲಾಯಿತು. ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಬರಬೇಕಾಗಿರುವ ತೆರಿಗೆ ಪಾಲನ್ನು ನೀಡದೆ ಜನರಲ್ಲಿ ಸುಳ್ಳನ್ನು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿಯ ಜನ ವಿರೋಧಿ ವರ್ತನೆಯನ್ನು ಖಂಡಿಸುವ ಸಲುವಾಗಿ ಇಡೀ ಬ್ಲಾಕ್ ವ್ಯಾಪ್ತಿಯಲ್ಲಿ ವಿಭಿನ್ನವಾದ ಅಭಿಯಾನವನ್ನು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದರು.   ಉಡುಪಿ ಬ್ಲಾಕ್ ನ […]

ಉಡುಪಿ: ಕಾಂಗ್ರೆಸ್ ಕಾರ್ಯಕರ್ತರಿಂದ ‘ಚೊಂಬು‘ ಪ್ರತಿಭಟನೆ– ಕೇಂದ್ರದ ವಿರುದ್ಧ ಆಕ್ರೋಶ

 (Udupi) ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ದ ಚೊಂಬು ಹಿಡಿದುಕೊಂಡು ಪ್ರತಿಭಟನೆ  ಕೈಗೊಳ್ಳಲಾಯಿತು.

ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಬರಬೇಕಾಗಿರುವ ತೆರಿಗೆ ಪಾಲನ್ನು ನೀಡದೆ ಜನರಲ್ಲಿ ಸುಳ್ಳನ್ನು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿಯ ಜನ ವಿರೋಧಿ ವರ್ತನೆಯನ್ನು ಖಂಡಿಸುವ ಸಲುವಾಗಿ ಇಡೀ ಬ್ಲಾಕ್ ವ್ಯಾಪ್ತಿಯಲ್ಲಿ ವಿಭಿನ್ನವಾದ ಅಭಿಯಾನವನ್ನು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದರು.

  ಉಡುಪಿ ಬ್ಲಾಕ್ ನ 133 ಬೂತ್ ಗಳಲ್ಲಿ ಕೂಡ ಪ್ರಚಾರಕ್ಕೆ ಹೋಗುವ ಕಾರ್ಯಕರ್ತರು ಈ ವಿಭಿನ್ನ ಅಭಿಯಾನದ ಮೂಲಕ ಮತಪ್ರಚಾರ ಮಾಡಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ ಕೂಡ, ಬಿಜೆಪಿಯ ಸಂಸದರ ಕೇಂದ್ರದ ಮುಂದೆ ಬಾಯಿ ಬಿಚ್ಚುತ್ತಿಲ್ಲ. ದೇಶದಲ್ಲಿಯೇ ಅತೀ ಹೆಚ್ಚು ತೆರಿಗೆ ಸಂಗ್ರಹ ಮಾಡುವ ರಾಜ್ಯವಿದ್ದರೆ ಅದು ಕರ್ನಾಟಕ. ಆದರೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ನೀಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ಕೂಡ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ನೀಡದೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದೆ.

 ಕೇಂದ್ರದ ಬಿಜೆಪಿ ಸರಕಾರ ನೀಡಿದ ಯಾವುದೇ ಭರವಸೆಗಳು ಈವರೆಗೆ ಈಡೇರಿಲ್ಲ. ಈ ಬಾರಿ ಮತ್ತೆ ದೇಶದ ಮತದಾರರು ಬಿಜೆಪಿಯನ್ನು ಬೆಂಬಲಿಸಿದರೆ ಮುಂದೆ ಪ್ರತಿಯೊಬ್ಬರಿಗೂ ಚೊಂಬೇ ಗತಿಯಾಗಲಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ (Udupi Block Congress President Ramesh Kanchan) ಹೇಳಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು (Ashok Kumar Kodavooru), ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಹರೀಶ್ ಕಿಣಿ (Harish kini)ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.