ಭೀಕರ ಕಾರು ಅಪಘಾತ : ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ಮೃತ್ಯು
(Andra Pradesha) ಆಂಧ್ರ ಪ್ರದೇಶ : ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನಟಿ ಪವಿತ್ರಾ ಜಯರಾಂ ಭೀಕರ ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.
ಮಂಡ್ಯದವರಾಗಿದ್ದ ಪವಿತ್ರಾ, ತೆಲುಗಿನ ತ್ರಿನಯನಿ ಧಾರಾವಾಹಿ ಮೂಲಕ ತೆಲುಗು ಪ್ರೇಕ್ಷಕರಿಗೂ ಹತ್ತಿರವಾಗಿದ್ದರು.
ಅವರಿಗೆ ಸುಮಾರು 35 ವರ್ಷ ವಯಸ್ಸಾಗಿತ್ತು.
ಕನ್ನಡದ ‘ರೋಬೋ ಫ್ಯಾಮಿಲಿ’ ಹಾಸ್ಯ ಧಾರಾವಾಹಿ ಮೂಲಕ ನಟನೆಗೆ ಎಂಟ್ರಿ ಕೊಟ್ಟಿದ್ದ ಪವಿತ್ರಾ ಜಯರಾಂ ಅದಾದ ಬಳಿಕ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ತೆಲುಗಿನ ಜನಪ್ರಿಯ ಧಾರಾವಾಹಿಯಲ್ಲಿಯೂ ಸಹ ಪವಿತ್ರಾ ನಟಿಸುತ್ತಿದ್ದರು. ಪವಿತ್ರಾ ಪ್ರೇಕ್ಷಕರಿಗೆ ಮಾತ್ರವಲ್ಲದೆ ತೆಲುಗು ಪ್ರೇಕ್ಷಕರಿಗೂ ಸಹ ಬಹಳ ಹತ್ತಿರವಾಗಿದ್ದರು.
ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಿಗ್ಗೆ ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿದೆ. ಭೀಕರ ಅಪಘಾತದಲ್ಲಿ ನಟಿ ಪವಿತ್ರಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪವಿತ್ರಾ ಜಯರಾಂ ಜೊತೆಗೆ ಕಾರಿನಲ್ಲಿ ಅವರ ಕುಟುಂಬಕ್ಕೆ ಸಂಬಂಧಿಸಿದವರು ಇದ್ದರು ಎನ್ನಲಾಗುತ್ತಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

