ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa vadiraja Institute of technology) 11ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಆವರಣದಲ್ಲಿ ನೆರವೇರಿತು.
ಸಂಸ್ಥೆಯ ಕಾರ್ಯದರ್ಶಿ ಶ್ರೀ ರತ್ನಕುಮಾರ್ (Rathnakumar, Secretary of the Sode Vadiraja Mutt Education Trust) ಸಮಾರಂಭದ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಗಳು ಸಂಸ್ಥೆಗೆ ಒಂದು ಉತ್ತಮ ಜಾಹೀರಾತುಗಳಾಗಿವೆ. ವಿದ್ಯಾರ್ಥಿಗಳ ಉತ್ತಮ ನಡವಳಿಕೆ ಸಂಸ್ಥೆಯ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ.
ಪಧವೀದರರು ಸಮಾಜದ ಎಲ್ಲಾ ಸವಾಲುಗಳನ್ನು ಎದುರಿಸಲು ಬೇಕಾಗುವಂತಹ ಕೌಶಲ್ಯವನ್ನು ಹೊಂದಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರತೀ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಎರಡು ಉತ್ತಮ ಪ್ರಾಜೆಕ್ಟ್ಗಳಿಗೆ ಬಹುಮಾನ ವಿತರಿಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್ (Prof. Dr. Thirumaleshwara Bhat, Principal)ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಡೀನ್ಗಳು ವಿವಿಧ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

