• Home  
  • ತೆಂಕ ಎರ್ಮಾಳು: ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ S.S. L.C ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಭಿನಂದನೆ (At Kinara English medium School, Cogratulation to the SSLC student and Teachers)
- ಶಾಲಾ ಕಾಲೇಜು

ತೆಂಕ ಎರ್ಮಾಳು: ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ S.S. L.C ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಭಿನಂದನೆ (At Kinara English medium School, Cogratulation to the SSLC student and Teachers)

Share: ತೆಂಕ ಎರ್ಮಾಳು: ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ S.S. L.C ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಭಿನಂದನೆ (Thenka Yermal)ಎರ್ಮಾಳು:  ಎರ್ಮಾಳು ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿನ  S.S. L.C ವಿದ್ಯಾರ್ಥಿಗಳಿಗೆ ಹಾಗೂ  ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಶುಕ್ರವಾರ ಶಾಲಾ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಅಧ್ಯಕ್ಷ  ಕಿಶೋರ್ ಕುಮಾರ್ ವಹಿಸಿ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶತ ಪ್ರತಿಷತ ಬರಲು ಶ್ರಮವಹಿಸಿದ ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. […]

ತೆಂಕ ಎರ್ಮಾಳು: ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ S.S. L.C ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಭಿನಂದನೆ

(Thenka Yermal)ಎರ್ಮಾಳು:  ಎರ್ಮಾಳು ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿನ  S.S. L.C ವಿದ್ಯಾರ್ಥಿಗಳಿಗೆ ಹಾಗೂ  ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಶುಕ್ರವಾರ ಶಾಲಾ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಅಧ್ಯಕ್ಷ  ಕಿಶೋರ್ ಕುಮಾರ್ ವಹಿಸಿ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶತ ಪ್ರತಿಷತ ಬರಲು ಶ್ರಮವಹಿಸಿದ ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

 ಮುಖ್ಯ ಅತಿಥಿಯಾಗಿ ಆಗಮಿಸಿದ  ಮುಂಬೈ ಶಾಲಾ ಕಟ್ಟಡ ಸಮಿತಿಯ ಅಧ್ಯಕ್ಷರ ಅಮಿತ್ ಪುತ್ರನ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವುದರ ಜೊತೆಗೆ ಶಿಕ್ಷಕರನ್ನು ಸನ್ಮಾನಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮೊಗವೀರ ಸಭಾದ ಅಧ್ಯಕ್ಷರಾದ ಲಿಂಗಪ್ಪ ಪುತ್ರನ್, ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಪ್ರಭಾಕರ್ ಪುತ್ರನ್, ಆಡಳಿತ ಮಂಡಳಿ ಸಮಿತಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು  ಉಪಸ್ಥಿತರಿದ್ದರು.

  ಮುಖ್ಯ ಶಿಕ್ಷಕಿ ಶ್ರೀಮತಿ ಪ್ರೀತಿ ಸುವರ್ಣ  ಸ್ವಾಗತಿಸಿದರು. ಶ್ರೀಮತಿ ಪ್ರತಿಮ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಆಶಾ ಕೆ. ಅಮೀನ್ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.