• Home  
  • ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು‌ ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್ (BJP’S victory in the South-West graduate and teacher Constituency : MLA Rjesh Naik)
- ರಾಜಕೀಯ

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು‌ ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್ (BJP’S victory in the South-West graduate and teacher Constituency : MLA Rjesh Naik)

Share: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು‌ ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್ (Bantwala) ಬಂಟ್ವಾಳ; ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಎರಡು ಕ್ಷೇತ್ರಕ್ಕೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿಯೇ ಬಂಟ್ವಾಳ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈ ಎರಡು ಸ್ಥಾನಗಳಲ್ಲಿಯೂ ಬಿಜೆಪಿ ಗೆಲುವು ನಿಶ್ಚಿತ ಎಂದು ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು‌ ಹೇಳಿದ್ದಾರೆ. ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ […]

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು‌ ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್

(Bantwala) ಬಂಟ್ವಾಳ; ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಎರಡು ಕ್ಷೇತ್ರಕ್ಕೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿಯೇ ಬಂಟ್ವಾಳ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈ ಎರಡು ಸ್ಥಾನಗಳಲ್ಲಿಯೂ ಬಿಜೆಪಿ ಗೆಲುವು ನಿಶ್ಚಿತ ಎಂದು ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು‌ ಹೇಳಿದ್ದಾರೆ.
 ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ
ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪ್ರಮುಖ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತರ ಚುನಾವಣೆಗಿಂತ ಈ ಚುನಾವಣೆ ಭಿನ್ನವಾಗಿದ್ದು, ನೈರುತ್ಯ ಕೇತ್ರದ ಎರಡು ಸ್ಥಾನಗಳ ಗೆಲುವು ಪ್ರಾಮುಖ್ಯವಾಗಿದೆ. ಈ ನಿಟ್ಟಿನಲ್ಲಿ  ಪಕ್ಷ ನೀಡಿರುವ  ಜವಾಬ್ದಾರಿಯನ್ನು ಕಾರ್ಯಕರ್ತರು ಅತ್ಯಂತ ಶೃದ್ದೆಯಿಂದ ಮಾಡಿದಾಗ ಬಿಜೆಪಿಗೆ ಗೆಲುವು ಸುಲಭವಾಗಲಿದೆ ಎಂದರು.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ಭಾವನಾತ್ಮಕ ಸಂಬಂಧವನ್ನು ಹೊಂದಿರುವ ದ.ಕ.ಮತ್ತು ಉಡುಪಿ ಜಿಲ್ಲೆಯ  ಜನತೆ ಪಕ್ಷಕ್ಕೆ ಶಕ್ತಿ ನೀಡಿದ್ದಾರೆ. ಮತದಾನಕ್ಕೆ ಉಳಿದಿರುವ ದಿನಗಳವರೆಗೂ ಮತದಾರರೊಂದಿಗೆ ನಿರಂತರವಾದ ಸಂಪರ್ಕವನ್ನಿರಿಸಿಕೊಂಡು ಪ್ರತಿಯೊಬ್ಬರೂ ಮತದಾನ ಮಾಡಿಸುವ ಮೂಲಕ ಅಭ್ಯರ್ಥಿಗಳಾದ ಡಾ. ಧನಂಜಯ್ ಸರ್ಜಿ ಹಾಗೂ ಎಸ್.ಎಲ್. ಬೋಜೇಗೌಡರ ಗೆಲುವಿಗೆ ಕಾರ್ಯಕರ್ತರು ಸಹಕರಿಸುವಂತೆ ಕರೆ ನೀಡಿದರು.
 ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿ, ನಮ್ಮ ಗೆಲುವು‌ ಕಾರ್ಯಕರ್ತರ ಗೆಲುವಾಗಲಿದೆ. ವಿಧಾನಪರಿಷತ್ತಿನಲ್ಲಿ ಪಧವೀಧರರ ಹಾಗೂ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡುವುದಾಗಿ ಭರವಸೆ ಇತ್ತರು.
 ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್. ಬೋಜೆಗೌಡ  ಮಾತನಾಡಿ, ಸಂಘಟನೆ ಮತ್ತು ಶಿಸ್ತಿಗೆ ಇನ್ನೊಂದು ಹೆಸರು ಬಿಜೆಪಿಯಾಗಿದೆ. ಅಂತಹ ಪಕ್ಷದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ನಾಡು, ನುಡಿಯ ಜೊತೆಗೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಿದ್ದಾರೆ ಎಂದರು.
 ಪಠ್ಯ ಪುಸ್ತಕದ ವಿಚಾರದಲ್ಲಿ ರಾಜಕೀಯ ಸಲ್ಲದು, ಜೀವನ ಮೌಲ್ಯವನ್ನು ಕಾಪಾಡುವ ಪೂರಕವಾದ ಶಿಕ್ಷಣ ನೀಡಿದಾಗ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದ ಅವರು,‌ ಜೆಡಿಎಸ್ -ಬಿಜೆಪಿ ಹೊಂದಾಣಿಕೆ ಶಾಶ್ವತವಾಗಿ ಇರಬೇಕು. ಅದಕ್ಕಾಗಿ ಎನ್.ಡಿ.ಎ.ಕೂಟಕ್ಕೆ ಬೆಂಬಲ ನೀಡುವಂತೆ  ಮನವಿ‌ ಮಾಡಿದರು.
 ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಕಾರ್ಯಕರ್ತರು ಸವಾಲಾಗಿ‌ ಸ್ವೀಕರಿಸಬೇಕು. ರಾಜಕೀಯವಾಗಿ ಅಧಿಕಾರವನ್ನು ಕಳೆದುಕೊಳ್ಳುವುದು ಸುಲಭ. ಬಳಿಕ ಅಧಿಕಾರ ಪಡೆಯುವುದು ಅಷ್ಟು ಸುಲಭದ ಮಾತಲ್ಲ. ಹಾಗಾಗಿ ಎಲ್ಲರನ್ನು ಚುನಾವಣೆಯಲ್ಲಿ ತೊಡಗಿಸಿಕೊಂಡು ಗೆಲುವು ಸಾಧಿಸಬೇಕು ಎಂದು  ತಿಳಿಸಿದರು.
 ಒಂದು ವರ್ಷ ಪೂರೈಸುತ್ತಿರುವ ಕರ್ನಾಟಕ ಸರಕಾರ ಕೇಂದ್ರ ಸರಕಾರವನ್ನು ದೂರುವುದು, ಗ್ಯಾರಂಟಿಯ ಭಜನೆ‌ ಹೊರತು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಶೂನ್ಯವಾಗಿದೆ. ಅಸಮರ್ಥ ಕ್ಯಾಬಿನೆಟ್, ಶಿಕ್ಷಣ ಕ್ಷೇತ್ರ ಗೊಂದಲದಲ್ಲಿ ಮುಳುಗಿದ್ದ, ಈ ವಿಚಾರದಲ್ಲಿ ಖುದ್ದು ಮುಖ್ಯಮಂತ್ರಿಯವರೇ ತರಾಟೆಗೆ ತೆಗೆದುಕೊಳ್ಳಬೇಕಾದ ಪ್ರಸಂಗ ಉಂಟಾಯಿತು. ಕಾನೂನು ಸುವ್ಯವಸ್ಥೆಯಂತೂ ಸಂಪೂರ್ಣ ಹದಗೆಟ್ಟಿದೆ ಎಂದು ಟೀಕಾ ಪ್ರಹಾರಗೈದ ಪ್ರತಾಪಸಿಂಹ ನಾಯಕ್, ಬಿಜೆಪಿ ಕಾರ್ಯಕರ್ತರು, ಶಾಸಕರ ಮೇಲೆಯೇ ಪೊಲೀಸ್ ಇಲಾಖೆಯ ಮೂಲಕ ಸರಕಾರ ಸುಳ್ಳುಕೇಸು ದಾಖಲಿಸಿ ದಬ್ಬಾಳಿಕೆಯನ್ನು ನಡೆಸುತ್ತಿರುವುದು ಖಂಡನೀಯ ಎಂದರು.

  ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಚುನಾವಣಾ ಜಿಲ್ಲಾ ಸಂಚಾಲಕ ವಿಕಾಸ್ ಪುತ್ತೂರು ಸಭೆಯನ್ನುದ್ದೇಶಿಸಿ ಮಾತನಾಡಿದರು‌.
ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್ ಸಭಾಧ್ಯಕ್ಷತೆ ವಹಿಸಿದ್ದರು.
ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ನಾಗರಾಜ ಶೆಟ್ಟಿ, ರಾಜ್ಯ ಪ್ರಕೋಷ್ಟದ ಸಂಚಾಲಕ ದತ್ತಾತ್ರೇಯ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್,  ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ಎ. ರಾವ್, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ‌ ನಾರಾಯಣ, ಕಿಯೋನಿಕ್ಸ್ ನಿಗಮದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜೆ.ಡಿ.ಎಸ್.ಮುಖಂಡ ರಕ್ಷಿತ್ ಸುವರ್ಣ, ಬಂಟ್ವಾಳ ಮಂಡಲದ ಪ್ರ. ಕಾರ್ಯದರ್ಶಿ ರವೀಶ್ ಶೆಟ್ಟಿ ಕಾರ್ಕಳ, ಬಿಜೆಪಿ ಪ್ರಮುಖರಾದ ತುಂಗಪ್ಪ ಬಂಗೇರ, ಪುಳಿಂಚ ಶ್ರೀಧರ್ ಶೆಟ್ಟಿ, ಕಮಲಾಕ್ಷಿ ಕೆ. ಪೂಜಾರಿ, ಸುಲೋಚನ ಜಿ.ಕೆ. ಭಟ್, ಪ್ರಭಾಕರ ಪ್ರಭು, ರವೀಂದ್ರ ಕಂಬಳಿ, ಗೋವಿಂದಪ್ರಭು, ಉದಯಕುಮಾರ್ ರಾವ್, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಆನಂದ ಶಂಭೂರು, ಭಾರತಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
 ಸಂಚಾಲಕ ಮೋನಪ್ಪ ದೇವಸ್ಯ ಸ್ವಾಗತಿಸಿದರು.
ಚುನಾವಣಾ ಸಹ ಸಂಚಾಲಕ ಸುರೇಶ್ ಕೋಟ್ಯಾನ್ ವಂದಿಸಿದರು. ಮಂಡಲದ ಪ್ರ. ಕಾರ್ಯದರ್ಶಿ ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.