• Home  
  • ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ: ಬಿ.ವೈ. ವಿಜಯೇಂದ್ರ (NO injustice BJP party to Raghupathi Bhat: BY Raghavendra)
- ರಾಜಕೀಯ

ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ: ಬಿ.ವೈ. ವಿಜಯೇಂದ್ರ (NO injustice BJP party to Raghupathi Bhat: BY Raghavendra)

Share: ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ: ಬಿ.ವೈ. ವಿಜಯೇಂದ್ರ (Udupi) ಉಡುಪಿ: ವಿಧಾನ ಪರಿಷತ್‌ನ ಪದವಿಧರ ಕ್ಷೇತ್ರಕ್ಕೆ ಟಿಕೆಟ್ ಸಿಕ್ಕಿಲ್ಲ ಎಂದು ಉಡುಪಿಯಿಂದ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ. ಅವರಿಗೆ ಎಲ್ಲ ಅವಕಾಶಗಳನ್ನು ನೀಡಲಾಗಿತ್ತು. ಅವುಗಳನ್ನೆಲ್ಲ ಅವರು ಬಳಸಿಕೊಂಡಿದ್ದಾರೆ. ಆದರೆ ಈಗ ಅವರು ಎಡವಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.  ಅವರು ಉಡುಪಿಯಲ್ಲಿ ವಿಧಾನಪರಿಷತ್‌ ಚುನಾವಣೆ ಪ್ರಯುಕ್ತ ಪಕ್ಷದ ಘಟ ನಾಯಕರ ಸಮಾವೇಶದಲ್ಲಿ ಮಾತನಾಡಿದರು.  ವಿಧಾನ ಪರಿಷತ್‌ನಲ್ಲಿ ಗೆದ್ದು […]

ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ: ಬಿ.ವೈ. ವಿಜಯೇಂದ್ರ

(Udupi) ಉಡುಪಿ: ವಿಧಾನ ಪರಿಷತ್‌ನ ಪದವಿಧರ ಕ್ಷೇತ್ರಕ್ಕೆ ಟಿಕೆಟ್ ಸಿಕ್ಕಿಲ್ಲ ಎಂದು ಉಡುಪಿಯಿಂದ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ. ಅವರಿಗೆ ಎಲ್ಲ ಅವಕಾಶಗಳನ್ನು ನೀಡಲಾಗಿತ್ತು. ಅವುಗಳನ್ನೆಲ್ಲ ಅವರು ಬಳಸಿಕೊಂಡಿದ್ದಾರೆ. ಆದರೆ ಈಗ ಅವರು ಎಡವಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

 ಅವರು ಉಡುಪಿಯಲ್ಲಿ ವಿಧಾನಪರಿಷತ್‌ ಚುನಾವಣೆ ಪ್ರಯುಕ್ತ ಪಕ್ಷದ ಘಟ ನಾಯಕರ ಸಮಾವೇಶದಲ್ಲಿ ಮಾತನಾಡಿದರು.

 ವಿಧಾನ ಪರಿಷತ್‌ನಲ್ಲಿ ಗೆದ್ದು ಮತ್ತೆ ಬಿಜೆಪಿಗೆ ಬರುತ್ತೇವೆ ಎಂದು ಪಕ್ಷದಿಂದ ಉಚ್ಛಾಟನೆಗೊಂಡಿರುವ ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಆದರೆ ಅವರನ್ನು ಗೆಲ್ಲಿಸುವಂತಹ ಮೂರ್ಖರು ನಮ್ಮ ಪಕ್ಷದ ಮತದಾರರಲ್ಲ. ಆದ್ದರಿಂದ ಬಂಡಾಯ ಸ್ಪರ್ಧೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದರು.

 ಬಿಜೆಪಿಗೆ ಕಾರ್ಯಕರ್ತರೇ ಶಕ್ತಿ. ಪಕ್ಷದ ಅಭ್ಯರ್ಥಿ ಗೆದ್ದರೆ ತಾವೇ ಗೆದ್ದಂತೆ ಅವರು ಸಂಭ್ರಮಿಸುತ್ತಾರೆ. ಈ ಬಾರಿ ವಿಧಾನ ಪರಿಷತ್ತಿಗೆ ಸಾಕಷ್ಟು ಹಿರಿಯ ಆಕಾಂಕ್ಷಿಗಳಿದ್ದರು. ಆದರೆ ಪಕ್ಷ ಅಭ್ಯರ್ಥಿಯನ್ನು ಘೋಷಿಸಿದ ಮೇಲೆ ಒಪ್ಪಿಕೊಂಡು, ಅವರ ಪರ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವರು ಅವಕಾಶ ಸಿಕ್ಕಿಲ್ಲ ಎಂದು ನಾಯಕರನ್ನು ಟೀಕಿಸುತ್ತಿದ್ದಾರೆ. ಸಂಘಟನೆಗಿಂತ ಸ್ವಾರ್ಥದ ಬಗ್ಗೆ ಆಲೋಚಿಸಿದರೆ ದುರಂತವಾಗುತ್ತದೆ. ಆದರೆ ನೈರುತ್ಯ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಮತ್ತು ಎಸ್.ಎಲ್.ಭೋಜೇಗೌಡರು ಗೆಲ್ಲುವುದನ್ನು ಯಾರೂ ತಪ್ಪಿಸಿಕ್ಕಾಗುವುದಿಲ್ಲ ಎಂದು ಬಂಡಾಯ ಅಭ್ಯರ್ಥಿಗಳಿಗೆ ಸಂದೇಶ ನೀಡಿದರು.

 ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ವಹಿಸಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.