ಕಾರ್ಕಳ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ– ಕಲ್ಯಾ ಗ್ರಾಮ ಪಂಚಾಯತಿ ಸದಸ್ಯನ ಬಂಧನ
(Karkala)ಕಾರ್ಕಳ: ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಪಂಚಾಯತ್ ಸದಸ್ಯನೇ ಅತ್ಯಾಚಾರವೆಸಗಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ನಡೆದಿದೆ.
ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತಿ ಸದಸ್ಯ ಸಂತೋಷ್ ಪುತ್ರನ್ (46) ಎಂಬಾತ ಆರೋಪಿ. ಬಾಲಕಿ ಮೇಲೆ ಅತ್ಯಾಚಾರ ಎಸಗಿ ಲೈಂಗಿಕ ದೌರ್ಜನ್ಯ ನಡೆಸಿ ಬೆದರಿಕೆ ಹಾಕಿದ ಆರೋಪದಲ್ಲಿ ಆತನ ವಿರುದ್ಧ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ವಿವಾಹಿತನಾಗಿರುವ ಸಂತೋಷ್ ಪುತ್ರನ್ ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಈತನ ವಿರುದ್ಧ ಪೋಷಕರು ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು , ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಸಂತೋಷ್ ಪುತ್ರನ್ ನನ್ನು ಬಂಧಿಸಿ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

